ಭಟ್ಕಳ: ಚಲಿಸುತ್ತಿದ್ದ ಕಾರಿನಲ್ಲಿ ತಾಂತ್ರಿಕ ದೋಷದಿಂದ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ತಾಲೂಕಿನ ಬೈಲೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸಂತೋಷ ಜನಾರ್ಧನ ಆಚಾರಿ ಎಂಬುವವರಿಗೆ ಸೇರಿದ ಕಾರು ಇದಾಗಿದ್ದು ಮುಂಭಾಗದ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಕಾಣಿಸಿಕೊಂಡಿದೆ. ಎಲ್.ಪಿ.ಜಿ.ಸಂಪರ್ಕ ಇರುವ ಕಾರಾಗಿದ್ದು ಬೆಂಕಿ ಹೊತ್ತಿ ಉರಿಯತೊಡಗಿದೆ. ತಕ್ಷಣವೇ ಜಾಗೃತನಾದ ಚಾಲಕ ಕಾರಿನಿಂದ ಜಿಗಿದು ಸ್ವಲ್ಪದರಲ್ಲೇ ಪ್ರಾಣ ಉಳಿಸಿಕೊಂಡಿದ್ದಾನೆ.
ತಕ್ಷಣವೇ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸರಿಯಾದ ಸಮಯದಲ್ಲಿ ಬೆಂಕಿ ಆರಿಸಿದ್ದರಿಂದ ಯಾವುದೇ ಸ್ಫೋಟ ಸಂಭವಿಸಿಲ್ಲ