Slide
Slide
Slide
previous arrow
next arrow

ಸರಸ್ವತಿ ಪಿಯು ವಿದ್ಯಾರ್ಥಿಗಳು ಜಿಲ್ಲಾ ಮಟ್ಟದ ಭಗವದ್ಗೀತಾ ಸ್ಪರ್ಧೆಗಳಿಗೆ ಆಯ್ಕೆ

300x250 AD

ಕುಮಟಾ : ಶ್ರೀ ಸ್ವರ್ಣವಲ್ಲಿ ಮಹಾಸಂಸ್ದಾನದ ವತಿಯಿಂದ ನಡೆಯುತ್ತಿರುವ ಭಗವದ್ಗೀತಾ ಅಭಿಯಾನ 2022 ರ ಅಂಗವಾಗಿ ಇತ್ತೀಚೆಗೆ ಕುಮಟಾ ತಾಲ್ಲೂಕಿನ ಪದವಿಪೂರ್ವ ವಿದ್ಯಾರ್ಥಿಗಳಿಗೆ ಭಗವದ್ಗೀತಾ ಕಂಠಪಾಠ ಮತ್ತು ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಈ ಸ್ಪರ್ಧೆಯಲ್ಲಿ ವಿಧಾತ್ರಿ ಅಕಾಡೆಮಿಯ ಸಹಭಾಗಿತ್ವದ ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಬಿ. ಕೆ. ಭಂಡಾರಕರ್ಸ ಸರಸ್ವತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಕಿ. ಸ್ಮೃತಿ ಶಾನಭಾಗ , ಕಂಠಪಾಠದಲ್ಲಿ ಪ್ರಥಮ ಸ್ಥಾನ ಹಾಗೂ ಕು. ಅಕ್ಷತಾ ಶಾನಭಾಗ , ಭಾಷಣದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯರ ಈ ಸಾಧನೆಯನ್ನು ಕೊಂಕಣ ಎಜ್ಯುಕೇಶನ್ ಟ್ರಸ್ಟ್ ನ ಪದಾಧಿಕಾರಿಗಳು, ವಿಧಾತ್ರಿ ಅಕಾಡೆಮಿಯ ಸಹಸಂಸ್ಥಾಪಕ ಗುರುರಾಜ ಶೆಟ್ಟಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು ಮತ್ತು ಬೋಧಕ , ಬೋಧಕೆತರ ಸಿಬ್ಬಂದಿಗಳು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top