• Slide
    Slide
    Slide
    previous arrow
    next arrow
  • ಮುಗ್ವಾ ಸುಬ್ರಹ್ಮಣ್ಯನ ಸನ್ನಿಧಿಯಲ್ಲಿ ವಿಜೃಂಭಣೆಯ ಚಂಪಾ ಷಷ್ಠಿ ಉತ್ಸವ

    300x250 AD

    ಹೊನ್ನಾವರ: ಪುರಾಣ ಪ್ರಸಿದ್ಧ ಹಾಗೂ ನಾಗಾರಾಧನೆಯ ಪುಣ್ಯ ತಾಣವೆಂದೇ ಪ್ರಸಿದ್ಧಿ ಹೊಂದಿರುವ ತಾಲೂಕಿನ ಮುಗ್ವಾ ಶ್ರೀ ಸುಬ್ರಹ್ಮಣ್ಯ ದೇವಾಲದಲ್ಲಿ ಚಂಪಾ ಷಷ್ಠಿಯ ನಿಮಿತ್ತ ಜಾತ್ರಾ ಮಹೋತ್ಸವ ಸಾವಿರಾರು ಭಕ್ತರ ನಡುವೆ ಮಂಗಳವಾರ ವಿಜೃಂಭಣೆಯಿಂದ ನೇರವೇರಿತು.
    ಶ್ರೀ ಸುಬ್ರಹ್ಮಣ್ಯ ದೇವಾಲದಲ್ಲಿ ಬೆಳಿಗ್ಗೆಯಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು. ಭಕ್ತರಿಂದ ಹಣ್ಣು- ಕಾಯಿ ಸೇವೆ, ಅರ್ಚನೆ, ಆರತಿ, ಅಭಿಷೇಕ, ಸರ್ವ ಸೇವೆ, ಪಂಚಖಾದ್ಯ ಸೇವೆ, ಲಾಡು ಪ್ರಸಾದ ಸೇವೆ ಸೇರಿದಂತೆ ವಿವಿಧ ಸೇವೆಯನ್ನು ಸಲ್ಲಿಸಿದರು. ಸಮೀಪದ ನಾಗಬನದಲ್ಲಿರುವ ನಾಗ ದೇವರಿಗೆ ಕ್ಷೀರಾಭಿಷೇಕ, ಆರತಿ ಮತ್ತು ಫಲಾಭಿಷೇಕ ಸೇರಿದಂತೆ ವಿವಿಧ ಸೇವೆ ಸಲ್ಲಿಸಲಾಯಿತು. ಮುಂಜಾನೆ 6 ಗಂಟೆಯಿಂದ ದೇಗುಲದಲ್ಲಿ ದರ್ಶನ ಆರಂಭವಾಗಿದ್ದು, ರಾತ್ರಿ 8 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿತ್ತು. ಭಕ್ತರು ಸರತಿ ಸಾಲಿನಲ್ಲಿ ದರ್ಶನ ಪಡೆಯುವುದಕ್ಕಾಗಿ ಪೆಂಡಾಲ್ ವ್ಯವಸ್ಥೆ, ಅಲ್ಲಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿದ್ದರು.
    ಶಾಸಕ ದಿನಕರ ಶೆಟ್ಟಿ, ಮಾಜಿ ಶಾಸಕರಾದ ಮಂಕಾಳ ವೈದ್ಯ, ಶಾರದಾ ಶೆಟ್ಟಿ ಸೇರಿದಂತೆ ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿದಂತೆ ನಾಡಿನ ಮೂಲೆಮೂಲೆಯಿಂದ ಆಗಮಿಸಿದ ಸಾವಿರಾರು ಭಕ್ತರು ಇಷ್ಟಾರ್ಥ ಪ್ರಾಪ್ತಿಗಾಗಿ ಸಂಕಲ್ಪಿಸಿಕೊಂಡು ಶ್ರೀ ದೇವರ ಪ್ರಸಾದ ಸ್ವೀಕರಿಸಿ ಕೃತಾರ್ಥರಾದರು.
    ಪ್ರತಿ ಬಾರಿಯಂತೆ ಸಕಲ ಸಿದ್ಧತೆಯೊಂದಿಗೆ ಅದ್ಧೂರಿಯಾಗಿ ಚಂಪಾಷಷ್ಠಿ ಉತ್ಸವ ನಡೆಯುತ್ತಿದೆ. ವಿವಿಧ ಸೇವಾ ಕಾರ್ಯಗಳಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಭಕ್ತರಿಗೆ ಸೇವಾ ಕೌಂಟರ್ ತೆರೆದು ಮಾಹಿತಿ ನೀಡಲಾಗುತ್ತಿದೆ. ಪಾನಕ ಸೇವೆ, ಮಧ್ಯಾಹ್ನ, ರಾತ್ರಿಯವರೆಗೂ ಭೋಜನ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಾ.ಪಂ. ಹಾಗೂ ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆಯ ಜೊತೆಗೆ ವಿವಿಧ ಸಂಘಟನೆಯವರು ಸಹಕಾರ ನೀಡಿದ್ದಾರೆ ಎಂದು ಟ್ರಸ್ಟ್ ಅಧ್ಯಕ್ಷ ಎಸ್.ಆರ್.ಹೆಗಡೆ ಹೇಳಿದರು.

    ಶಾಸಕ ದಿನಕರ ಶೆಟ್ಟಿ ಮಾತನಾಡಿ, ರಾಜ್ಯದ ವಿವಿಧೆಡೆಯಿಂದ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ಆಡಳಿತ ಮಂಡಳಿ ಉತ್ತಮ ವ್ಯವಸ್ಥೆ ಕಲ್ಪಿಸಿದೆ. ಹತ್ತು ಸಾವಿರಕ್ಕೂ ಅಧಿಕ ಭಕ್ತರಿಗೆ ಪ್ರಸಾದ ಭೋಜನದ ವ್ಯವಸ್ಥೆ ಮಾಡಿದೆ. ಭಕ್ತರು ಕೂಡಾ ಶ್ರದ್ಧಾಭಕ್ತಿಯಿಂದ ಧಾರ್ಮಿಕ ಸೇವಾಕಾರ್ಯದಲ್ಲಿ ತೊಡಗಿ ಇಷ್ಟಾರ್ಥ ಸಿದ್ಧಿಗಾಗಿ ಪ್ರಾರ್ಥಿಸುತ್ತಿದ್ದಾರೆ. ಎಲ್ಲರಿಗೂ ಒಳಿತಾಗಲಿ ಎಂದು ಹಾರೈಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top