Slide
Slide
Slide
previous arrow
next arrow

ಯುವಜನೋತ್ಸವದಿಂದ ಪ್ರತಿಭೆಗಳಿಗೆ ಉತ್ತೇಜನ: ರುದ್ರಣ್ಣಗೌಡ

300x250 AD

ಕಾರವಾರ: ಯುವಜನೋತ್ಸವವು ಯುವಜನರಲ್ಲಿ ಜಾನಪದ, ಶಾಸ್ತ್ರೀಯ ಕಲೆ, ಸಂಗೀತ ಮತ್ತು ಸಂಸ್ಕೃತಿಯನ್ನು ಉತ್ತೇಜಿಸುವ ಮಹತ್ತರ ವೇದಿಕೆಯಾಗಿದೆ ಎಂದು ಭೂಮಾಪನ ಇಲಾಖೆಯ ಉಪನಿರ್ದೇಶಕ ರುದ್ರಣ್ಣಗೌಡ ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಾಂಸ್ಕೃತಿಕ ಪ್ರತಿಭೆ ತೋರ್ಪಡಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಈ ಕಾರ್ಯಕ್ರಮ ಆಯೋಜಿಸಿದೆ. ಇದರಿಂದಾಗಿ ಇಲ್ಲಿನ ವಿದ್ಯಾರ್ಥಿಗಳಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಲು ಸುವರ್ಣ ಅವಕಾಶವನ್ನು ನೀಡಿದಂತಾಗಿದೆ ಎಂದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕ ಎನ್.ಪ್ರವೀಣ್ ಮಾತನಾಡಿ, ಯುವಜನೋತ್ಸವದಲ್ಲಿ ಪಾಲ್ಗೊಳ್ಳಲು ಎಲ್ಲಾ ವರ್ಗದ ಮಕ್ಕಳಿಗೂ ಅವಕಾಶವನ್ನು ಕಲ್ಪಿಸಲಾಗಿದೆ. ಅದರಲ್ಲೂ ವಿಶೇಷವಾಗಿ ದಯಾನಿಲಯ ವತಿಯಿಂದ ವಿಶೇಷ ಚೇತನ ಮಕ್ಕಳಿಗೂ ತಮ್ಮ ಸಾಂಸ್ಕೃತಿಕ ಪ್ರತಿಭೆಯನ್ನು ವ್ಯಕ್ತಪಡಿಸಲು ಇಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಹಿರಿಯ ಕಲಾವಿದ ಮೋಹನ್, ಕಲಾವಿದ ಪುರುಷೋತ್ತಮ ಗೌಡ, ತರಬೇತುದಾರ ಪ್ರಕಾಶ್ ರೇವಣಕರ್, ಅಧಿಕಾರಿಗಳು, ನಿರ್ಣಾಯಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top