ಕಾರವಾರ: ವಿದ್ಯಾರ್ಥಿ ಜೀವನದಲ್ಲಿಯೇ ಕೌಶಲ್ಯವನ್ನು ಬೆಳೆಸಿಕೊಳ್ಳುವುದು ಅತೀ ಅವಶ್ಯಕ. ವಿದ್ಯಾರ್ಥಿ ದಿಶೆಯಲ್ಲಿ ಪಡೆದ ಜ್ಞಾನವೇ ನಮ್ಮ ಮಂದಿನ ಜೀವನಕ್ಕೆ ನಾಂದಿಯಾಗಲಿದೆ ಎಂದು ‘ಐ- ಮೇಕ್ ಇ- ಇಂಡಿಯಾ’ ಏರ್‌ಕ್ರಾಫ್ಟ್ ನಲ್ಲಿ ಮೆಕ್ಯಾನಿಕಲ್ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಹಿಂದೂ ಹೈಸ್ಕೂಲಿನ ಮಾಜಿ ವಿದ್ಯಾರ್ಥಿ ಮಹಮ್ಮದ್ ಅಮೀನ್ ಶೇಖ್ ಹೇಳಿದರು.
ನಗರದ ಹಿಂದೂ ಪ್ರೌಢಶಾಲೆಯ 125ನೇ ವರ್ಷಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾದ ‘ಕರಿಯರ್ಸ್ & ಯು’ ವಿಚಾರಗೋಷ್ಠಿಯಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಾರವಾರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಅನಿರುದ್ಧ ಹಳದಿಪುರಕರ ಮಾತನಾಡಿದರು. ಹಿಂದೂ ಪ್ರೌಢಶಾಲೆಯ ಮುಖ್ಯಾಧ್ಯಾಪಕ ಅರುಣ ರಾಣೆ ಸ್ವಾಗತ ಕೋರಿದರು. ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ವಂದನಾರ್ಪಣೆ ಸಲ್ಲಿಸಿದರು. ಸುಮತಿ ದಾಮ್ಲೆ ಪ್ರೌಢಶಾಲೆಯ ಶಿಕ್ಷಕ ಸಂತೋಷ ಶೇಟ್ ಕಾರ್ಯಕ್ರಮ ನಿರ್ವಹಿಸಿದರು. ಮುಖ್ಯಾಧ್ಯಾಪಕಿ ಗಿರಿಜಾ ಬಂಟ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ‘ಬೆಟರ್ ಕಾರವಾರ’ ಸಂಸ್ಥೆಯ ಪ್ರೀತೇಶ್ ರಾಣೆ, ಸೂರಜ್ ಗೋವೇಕರ ಹಾಗೂ ಮೂರೂ ಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದು ಕಾರ್ಯಕ್ರಮದ ಪ್ರಯೋಜನ ಪಡೆದರು.