ಶಿರಸಿ: ತಾಲೂಕಿನ ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯ ವಿದ್ಯಾರ್ಥಿಗಳು ಭಗವದ್ಗೀತಾ ಅಭಿಯಾನದ ಅಂಗವಾಗಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಂಠಪಾಠ ಸ್ಪರ್ಧೆಯ ಹಿರಿಯರ ವಿಭಾಗದಲ್ಲಿ ಎಂಟನೆಯ ತರಗತಿಯ ಕುಮಾರಿ ಅಪೂರ್ವಾ ಭಟ್ ಪ್ರಥಮ ಸ್ಥಾನ ಹಾಗೂ ಭಗವದ್ಗೀತಾ ರಸಪ್ರಶ್ನೆ ಸ್ಪರ್ಧೆಯಲ್ಲಿ ಒಂಭತ್ತನೆಯ ತರಗತಿಯ ವಿದ್ಯಾರ್ಥಿಗಳಾದ ಕುಮಾರ ಸುಘೋಶ ಜೋಶಿ ಮತ್ತು ಕುಮಾರ ಅವ್ಯಕ್ತಾ ಹೆಗಡೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಹಾಗೂ ಕಿರಿಯರ ವಿಭಾಗದ ಕಂಠಪಾಠದಲ್ಲಿ ಏಳನೆಯ ತರಗತಿಯ ಕುಮಾರಿ ಸುನಿಧಿ ಹೆಗಡೆ ದ್ವಿತೀಯ ಸ್ಥಾನ ಪಡೆದು ಸಂಸ್ಥೆಗೆ ಕೀರ್ತಿ ತಂದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಚಾರ್ಯರು, ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿ ವಿದ್ಯಾರ್ಥಿಗಳಿಗೆ ಮುಂದಿನ ಸ್ಪರ್ಧೆಗೆ ಶುಭ ಹಾರೈಸಿದ್ದಾರೆ.
ವಿವಿಧ ಸ್ಪರ್ಧೆಗಳಲ್ಲಿ ಶ್ರೀನಿಕೇತನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ
![](https://euttarakannada.in/wp-content/uploads/2022/12/BHAGAVADGEETA-DISTRICT-LEVEL-730x438.jpg?v=1669894016)