• Slide
    Slide
    Slide
    previous arrow
    next arrow
  • ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಆರ್‌ವಿಡಿ ಚಾಲನೆ

    300x250 AD

    ಜೊಯಿಡಾ: ತಾಲೂಕಿನ ಜಗಲಬೇಟ ಗ್ರಾಮ ಪಂಚಾಯತಿ ವ್ಯಾಪ್ತಿಯ ತಿಂಬೋಲಿ, ದುರ್ಗಿ ಹಾಗೂ ರಾಮನಗರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ಇಲಾಕೆಯ ವಿವಿಧ ಕಾಮಗಾರಿಗಳಿಗೆ ಶಾಸಕ ಆರ್.ವಿ.ದೇಶಪಾಂಡೆ ಚಾಲನೆ ನೀಡಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನ ಕ್ಷೇತ್ರದಲ್ಲಿ ನಾನು ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತನ್ನು ನೀಡುತ್ತೇನೆ. ಈಗಾಗಲೇ ನನ್ನ ಕ್ಷೇತ್ರದ ಜನತೆಗೆ ಮೂಲ ಸೌಕರ್ಯಗಳನ್ನು ನೀಡುವ ಕೆಲಸ ಮಾಡಿದ್ದೇನೆ. ರಸ್ತೆ, ಕುಡಿಯುವ ನೀರು, ಶಾಲೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಚಾಲನೆಯನ್ನು ನೀಡಿದ್ದೇನೆ. ಕೆಲಸ ಮಾಡುವಾಗ ಸ್ಥಳೀಯ ಜನರು ಕೆಲಸವನ್ನು ಗಮನಿಸಬೇಕು. ಕೆಲಸ ಸರಿಯಾಗಿ ಮಾಡದೇ ಇದ್ದಲ್ಲಿ ನನ್ನ ಗಮನಕ್ಕೆ ತರಬೇಕು. ಗುತ್ತಿಗೆದಾರರು ಗುಣಮಟ್ಟದ ಕೆಲಸ ಮಾಡಬೇಕು ಎಂದರು.
    ಈ ಸಂದರ್ಭದಲ್ಲಿ ತಹಶೀಲ್ದಾರ ಶೈಲೇಶ ಪರಮಾನಂದ, ಜಗಲಬೇಟ ಗ್ರಾಮ ಪಂಚಾಯತಿ ಅಧ್ಯಕ್ಷ ಗಿರೀಶ್ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಬಶೀರ್ ಶೇಖ್, ಪಂಚಾಯತರಾಜ್ ಇಲಾಖೆಯ ಇಝಾನ್ ಮಹಮ್ಮದ್, ಲೋಕೋಪಯೋಗಿ ಇಲಾಕೆಯ ವಿಜಯಕುಮಾರ ಇತರರು ಉಪಸ್ಥಿತರಿದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top