ಯಲ್ಲಾಪುರ: ನಮ್ಮ ನಾಡು, ನುಡಿ, ಜಲದ ಹಿತಾಸಕ್ತಿಗೆ ಯಾವುದೇ ಕಾರಣಕ್ಕೆ ಧಕ್ಕೆಯಾಗಲು ಬಿಡುವುದಿಲ್ಲ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.
ಅವರು ಶುಕ್ರವಾರ ಪಟ್ಟಣದ ಅಂಬೇಡ್ಕರ್ ಸರ್ಕಲ್‌ನಲ್ಲಿ ಕನ್ನಡ ಜ್ಯೋತಿ ರಥಯಾತ್ರೆಯನ್ನು ಸ್ವಾಗತಿಸಿ, ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ಮಾತನಾಡಿದರು. ಮಹಾರಾಷ್ಟ್ರ ಕೇವಲ ರಾಜಕೀಯ ಕಾರಣಕ್ಕಾಗಿ ಗಡಿ ವಿವಾದ ಸೃಷ್ಟಿಸುತ್ತಿದೆ. ಹಾವೇರಿ ಸಮ್ಮೇಳನದ ಮೂಲಕ ಮಹಾರಾಷ್ಟ್ರಕ್ಕೆ ತಕ್ಕ ಉತ್ತರ ನೀಡಲಾಗುವುದು. ನಾಡು, ನುಡಿಯ ಪಕ್ಷಬೇಧ ಮರೆತು ಒಗ್ಗಟ್ಟಾಗಿ ಅದನ್ನು ಎದುರಿಸಲು ಬದ್ಧರಾಗಿದ್ದೇವೆ ಎಂದರು.
ಜಿಲ್ಲಾ ಕಸಾಪ ಅಧ್ಯಕ್ಷ ಬಿ.ಎನ್.ವಾಸರೆ, ತಹಶೀಲ್ದಾರ ಶ್ರೀಕೃಷ್ಣ ಕಾಮ್ಕರ್, ಪ.ಪಂ ಅಧ್ಯಕ್ಷೆ ಸುನಂದಾ ದಾಸ್, ತಾಲೂಕು ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ್, ಪ.ಪಂ ಮುಖ್ಯಾಧಿಕಾರಿ ಸಂಗನಬಸಯ್ಯ, ತಾಲೂಕಾ ಕ.ಸಾ.ಪ ಅಧ್ಯಕ್ಷ ಸುಬ್ರಹ್ಮಣ್ಯ ಭಟ್ಟ, ಗೌರವ ಕಾರ್ಯದರ್ಶಿಗಳಾದ ಸಂಜೀವಕುಮಾರ ಹೊಸ್ಕೇರಿ, ಶ್ರೀಧರ ಅಣಲಗಾರ, ನಿವೃತ್ತ ಪ್ರಾಂಶುಪಾಲರುಗಳಾದ ಬೀರಣ್ಣ ನಾಯಕ ಮೊಗಟಾ, ಶ್ರೀರಂಗ ಕಟ್ಟಿ ಹಾಗೂ ಜಯರಾಮ ಗುನಗಾ, ತಾಲೂಕಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಪ್ರಕಾಶ ನಾಯಕ, ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ನಾರಾಯಣ ನಾಯಕ, ಮಲೇನಾಡು ಸೊಸೈಟಿ ಅಧ್ಯಕ್ಷ ಎಂ.ಆರ್.ಹೆಗಡೆ ಕುಂಬ್ರಿಗುಡ್ಡೆ, ಕಸಾಪ ಮಾಜಿ ತಾಲೂಕಾ ಅಧ್ಯಕ್ಷ ವೇಣುಗೋಪಾಲ ಮದ್ಗುಣಿ, ನಿವೃತ್ತ ತಹಶೀಲ್ದಾರ ಡಿ ಜಿ ಹೆಗಡೆ, ಸಾಹಿತಿ ಶಿವಲೀಲಾ ಹುಣಸಗಿ, ಲೇಖಕ ಟಿ.ವಿ.ಕೋಮಾರ, ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಎಪಿಎಂಸಿ ಬಳಿ ಸಾಂಕೇತಿಕವಾಗಿ ರಥವನ್ನು ಸ್ವಾಗತಿಸಲಾಯಿತು. ನಂತರ ಮೆರವಣಿಗೆಯಲ್ಲಿ ಅಂಬೇಡ್ಕರ್ ವೃತ್ತದವರೆಗೆ ಸಾಗಿ ಅಲ್ಲಿ ಪೂಜೆ ಸಲ್ಲಿಸಿ, ಧಾರವಾಡದತ್ತ ರಥವನ್ನು ಬೀಳ್ಕೊಡಲಾಯಿತು. ಸಾವಿರಾರು ಜನರು ರಥ ಯಾತ್ರೆಯ ಸ್ವಾಗತಿಸುವ ಕ್ಷಣಕ್ಕೆ ಸಾಕ್ಷಿಯಾದರು.