ಬೆಂಗಳೂರು: ಎಸ್‍ಎಸ್‍ಎಲ್‍ಸಿ ಫರೀಕ್ಷೆ ಫಲಿತಾಂಶವನ್ನು ಇಂದು ಪ್ರಕಟಗೊಳಿಸುವುದಾಗಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಈ ಕುರಿತು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಇಂದು ಮಧ್ಯಾಹ್ನ 3.30ಕ್ಕೆ ಸುದ್ದಿಗೋಷ್ಠಿ ನಿಗದಿಪಡಿಸಿದ್ದು, ನೂತನ ಶಿಕ್ಷಣ ಸಚಿವರು ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್ ಸೈಟ್ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಕೋವಿಡ್ ಆತಂಕದಲ್ಲೂ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮವಹಿಸಿ ಶಿಕ್ಷಣ ಇಲಾಖೆ ಕಳೆದ ಜು. 19 ಮತ್ತು 22 ರಂದು ಸರಳವಾಗಿ 40 ಅಂಕಗಳಿಗೆ ಪರೀಕ್ಷೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಸಿತ್ತು. ಪರೀಕ್ಷೆಗೆ 99.65% ವಿದ್ಯಾರ್ಥಿಗಳು ಹಾಜರಾಗಿದ್ದರು.
ಫಲಿತಾಂಶವನ್ನು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ಜಾಲತಾಣ, sslc.karnataka.gov.in, kseeb.kar.nic.in ಅಥವಾ karresults.nic.in ನಲ್ಲಿ ಪ್ರಕಟಗೊಳ್ಳಲಿದೆ. ಈ ಜಾಲತಾಣಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳು ನೋಂದಣಿ ಸಂಖ್ಯೆ ನಮೂಸಿದಿಸಿ ವೀಕ್ಷಿಸಬಹುದಾಗಿದೆ.