Slide
Slide
Slide
previous arrow
next arrow

ಡಿ. 5 ರಿಂದ ಸ್ಮಾರ್ಟ್ ಫೋನ್‌ಗಳ ರಿಪೇರಿ ತರಬೇತಿ

300x250 AD

ಕುಮಟಾ: ಕೆನರಾ ಬ್ಯಾಂಕ್ ಗ್ರಾಮೀಣ ಸ್ವ- ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಡಿ.5ರಿಂದ ಜ.01ರವರೆಗೆ ಸ್ಮಾರ್ಟ್ಫೋನ್‌ಗಳ ರಿಪೇರಿ ತರಬೇತಿ ನಡೆಯಲಿದೆ.
ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ- ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ 18ರಿಂದ 45 ವರ್ಷಗಳು. ಕನಿಷ್ಟ ವಿದ್ಯಾರ್ಹತೆ ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು. ಈ ತರಬೇತಿಯ ಜೊತೆಗೆ ವ್ಯಕ್ತಿತ್ವ ವಿಕಸನ, ಬ್ಯಾಂಕಿಂಗ್, ಮಾರ್ಕೇಟಿಂಗ್ ಹೀಗೆ ಮುಂತಾದ ಉದ್ಯಮಶೀಲತಾ ತರಬೇತಿಯನ್ನು ನೀಡಲಾಗುವುದು.
ಆಸಕ್ತರು ಸಂಪರ್ಕಿಸಬೇಕಾದ ವಿಳಾಸ: ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಇಂಡಸ್ಟ್ರಿಯಲ್ ಏರಿಯಾ, ಹೆಗಡೆ ರಸ್ತೆ, ಕುಮಟಾ- 581 343 ಉತ್ತರಕನ್ನಡ ಜಿಲ್ಲೆ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಲ್ಲದೇ ಮೊಬೈಲ್ ಸಂಖ್ಯೆ: 9449860007, 9538281989, 9916783825, 8880444612, 9620962004, ಸಂಪರ್ಕಿಸಿ ಹೆಚ್ಚಿನ ಮಾಹಿತಿ ಪಡೆಯಬಹುದಾಗಿದೆ.
ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ಆಸಕ್ತರು ತರಬೇತಿಗೆ ಬರುವಾಗ 4 ಪಾಸ್‌ಪೋರ್ಟ್ ಸೈಜ್ ಫೋಟೋ, ರೇಶನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಪಾನ್ ಕಾರ್ಡ್ ಇವುಗಳ 1 ಝೆರಾಕ್ಸ್ ಪ್ರತಿಯನ್ನು ತರಬೇಕು. ಈ ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗ ಕೈಗೊಳ್ಳಬೇಕೆಂದು ಕೋರಲಾಗಿದೆ.

300x250 AD
Share This
300x250 AD
300x250 AD
300x250 AD
Back to top