• Slide
    Slide
    Slide
    previous arrow
    next arrow
  • ವಿಶೇಷ ಚೇತನರಿಗೆ ಉತ್ತಮ ಅವಕಾಶ ನೀಡಬೇಕು: ಜಿ.ಎಸ್.ನಾಯ್ಕ

    300x250 AD

    ಹೊನ್ನಾವರ: ವಿಶೇಷಚೇತನ ಮಕ್ಕಳನ್ನು ಮಾನವೀಯ ಕಾಳಜಿ ಮತ್ತು ಗೌರವದಿಂದ ಕಾಣಬೇಕು. ಅವರಲ್ಲಿರುವ ಪ್ರತಿಭೆಯನ್ನು ಗುರುತಿಸಿ ಉತ್ತಮ ಅವಕಾಶ ಒದಗಿಸಿಕೊಡಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎಸ್.ನಾಯ್ಕ ಹೇಳಿದರು.
    ಪಟ್ಟಣದ ಪ್ರಭಾತನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶನಿವಾರ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ ವಿಶ್ವ ವಿಶೇಷ ಚೇತನರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ವಿಶೇಷ ಚೇತನ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಅಧಿಕಾರಿಗಳು ಮತ್ತು ಶಿಕ್ಷಕರು ಶ್ರಮಿಸಬೇಕು. ಅವರಿಗೆ ಸರ್ಕಾರದಿಂದ ದೊರಕುವ ಸೌಲಭ್ಯಗಳನ್ನು ಒದಗಿಸುವಲ್ಲಿ ಕೆಲಸ ಮಾಡಬೇಕು ಎಂದರು.
    ಕ್ಷೇತ್ರ ಸಮನ್ವಯಾಧಿಕಾರಿ ಎಸ್.ಎಂ.ಹೆಗಡೆ ಮಾತನಾಡಿ, ವಿಶೇಷ ಚೇತನರಿಗೆ ಸಮಾಜದಲ್ಲಿ ಬದುಕುವ ಹಕ್ಕು ಇದೆ. ಅವರ ಹಕ್ಕುಗಳನ್ನು ಗೌರವಿಸಬೇಕು. ಪಾಲಕರು, ಶಿಕ್ಷಕರು ಇಂಥ ಮಕ್ಕಳನ್ನು ತಾತ್ಸಾರದಿಂದ ನೋಡದೇ ಪ್ರೀತಿ ಮತ್ತು ಕಾಳಜಿಯಿಂದ ನೋಡಬೇಕು ಎಂದರು. ಪೆದ್ರೋ ಪೊವೆಡಾ ಶಾಲೆಯ ವಿಶೇಷ ಚೇತನ ವಿದ್ಯಾರ್ಥಿಗಳು ಗಾಯನ ಮತ್ತು ನೃತ್ಯ ಪ್ರದರ್ಶನ ನೀಡಿದರು.
    ಎಸ್‌ಡಿಎಂಸಿ ಅಧ್ಯಕ್ಷ ಮಾರುತಿ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಸಿಡಿಪಿಒ ಸುಶೀಲಾ ಮೊಗೇರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷೆ ಸಾಧನಾ ಬರ್ಗಿ, ಬಿಐಇಟಿಆರ್‌ಟಿ ಅಧಿಕಾರಿಗಳಾದ ರಾಮಚಂದ್ರ ಹಳದೀಪುರ, ಹೊನ್ನಿ ಮುಕ್ರಿ, ಮಂಜುಳಾ ಮೇಸ್ತ, ಶಿಕ್ಷಕರಾದ ಗೀತಾ ಚಂದಾವರ, ಮಂಗಲಾ ನಾಯ್ಕ, ಪೆದ್ರೋ ಪೊವೆಡಾ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು. ಶಿಕ್ಷಕಿ ಸುನೀತಾ ಮೇಸ್ತ ಕಾರ್ಯಕ್ರಮ ನಿರ್ವಹಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top