ಸಿದ್ದಾಪುರ: ಏಳನೇ ವೇತನ ಆಯೋಗ ರಚನೆ ಮಾಡಿ ಸರ್ಕಾರ ನೌಕರರ ಪರವಾಗಿದೆ ಎಂದು ತೋರಿಸಿಕೊಟ್ಟಿದ್ದಾರೆ. ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ಜತೆ ಚರ್ಚಿಸಿ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ಎನ್.ಪಿ.ಎಸ್ ಯೋಜನೆ ರದ್ಧುಗೊಳಿಸಿ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಆಡಳಿತಾತ್ಮಕ ವೆಚ್ಚದ ಜತೆ ಅಭಿವೃದ್ಧಿ ಕೆಲಸಗಳಿಗೂ ಸರ್ಕಾರದಲ್ಲಿ ಹಣ ಇರಬೇಕಾಗುತ್ತದೆ. ನೌಕರರು ಸಂವಿಧಾನ ಬದ್ದವಾದ ಜವಾಬ್ದಾರಿ ನಿಭಾಯಿಸಿ ಸಾರ್ವಜನಿಕರಿಗೆ ಸ್ಪಂದಿಸಿ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.
ಅವರು ಪಟ್ಟಣದ ನೆಹರು ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದಿಂದ ಸರ್ಕಾರಿ ನೌಕರರಿಗಾಗಿ ಆಯೋಜಿಸಿರುವ ಎರಡು ದಿನಗಳ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಸಂಘದ ತಾಲೂಕಾ ಅಧ್ಯಕ್ಷ ರಾಜೇಶ ನಾಯ್ಕ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕ ಮಾತನಾಡಿ ಸಂಘದ ಬೇಡಿಕೆಗಳನ್ನು ಇಡೇರಿಸುವಂತೆ ಒತ್ತಾಯಿಸಿದರು. ಈ ವೇಳೆ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನಾಯ್ಕ, ತಾಲೂಕಾ ದಂಡಾಧಿಕಾರಿ ಸಂತೋಷ ಭಂಡಾರಿ, ಸಂಘದ ಜಿಲ್ಲಾ ಕಾರ್ಯದರ್ಶಿ ರಮೇಶ ನಾಯ್ಕ, ತಾಲೂಕಾ ಖಜಾಂಚಿ ತೇಜಸ್ವಿ ನಾಯ್ಕ, ಕಾರ್ಯದರ್ಶಿ ಎನ್.ಐ.ಗೌಡ, ರಾಜ್ಯ ಪರಿಷತ್ ಸದಸ್ಯ ಯಶವಂತ ಅಪ್ಪಿನಬೈಲ್, ತಾಲೂಕಾ ಪಂಚಾಯ್ತಿ ಎನ್.ಆರ್.ಇ.ಜಿ ಸಹಾಯಕ ನಿರ್ದೇಶಕ ದಿನೇಶ ಡಿ ಉಪಸ್ಥಿತರಿದ್ದರು.
ಸಂಘದ ಕ್ರೀಡಾ ಕಾರ್ಯದರ್ಶಿ ಹರೀಶ ನಾಯ್ಕ ಸ್ವಾಗತಿಸಿದರು.ಸಂಘದ ತಾಲೂಕಾ ಅಧ್ಯಕ್ಷ ರಾಜೇಶ ನಾಯ್ಕ ಪ್ರಾಸ್ತಾವಿಕ ಮಾತನಾಡಿದರು.