ಶಿರಸಿ:ತಾಲೂಕಿನ ಇಸಳೂರಿನಲ್ಲಿರುವ ಶ್ರೀ ರಾಜರಾಜೇಶ್ವರೀ ವಿದ್ಯಾ ಸಂಸ್ಥೆ, ಸೋಂದಾ ಇದರ ಅಡಿಯಲ್ಲಿ ನಡೆಯುತ್ತಿರುವ ಶ್ರೀನಿಕೇತನ ಶಾಲೆಯ ಒಂಭತ್ತನೆಯ ತರಗತಿಯ ವಿದ್ಯಾರ್ಥಿಗಳಾದ ಕುಮಾರ ಅವ್ಯಕ್ತ ಹೆಗಡೆ ಹಾಗೂ ಕುಮಾರ ಸುಘೋಷ ಜೋಶಿ ಭಗವದ್ಗೀತಾ ಅಭಿಯಾನದ ಅಂಗವಾಗಿ ದಾವಣಗೆರೆಯಲ್ಲಿ ನಡೆದ ರಾಜ್ಯ ಮಟ್ಟದ ಭಗವದ್ಗೀತಾ ರಸಪ್ರಶ್ನೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದು ಸಂಸ್ಥೆಯ ಹಿರಿಮೆ ಮೆರೆದಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಚಾರ್ಯರು, ಶಿಕ್ಷಕ – ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪಾಲಕರು ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯಮಟ್ಟದ ಭಗವದ್ಗೀತಾ ರಸಪ್ರಶ್ನೆ ಸ್ಪರ್ಧೆ: ಶ್ರೀನಿಕೇತನ ವಿದ್ಯಾರ್ಥಿಗಳ ಸಾಧನೆ
