• first
    Slide
    Slide
    previous arrow
    next arrow
  • ಡಿ.11ರಂದು ಜೋಯಿಡಾ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆ

    300x250 AD

    ಜೋಯಿಡಾ: ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಯನ್ನ ಡಿ.11, ಭಾನುವಾರ ಮುಂಜಾನೆ 10 ಗಂಟೆಗೆ ಜೋಯಿಡಾ ಕುಣಬಿ ಭವನದಲ್ಲಿ  ಕರೆಯಲಾಗಿದೆ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ತಿಳಿಸಿದ್ದಾರೆ.

     ಅರಣ್ಯವಾಸಿಗಳ ಸಮಸ್ಯೆ ಸಮಗ್ರ ಕ್ರೋಢೀಕರಿಸಿ ಅರಣ್ಯವಾಸಿಗಳ ಹಿತ ಕಾಪಾಡುವ ಮತ್ತು ಭೂಮಿ ಹಕ್ಕಿಗೆ ಆಗ್ರಹಿಸಿ ಡಿಸೆಂಬರ್ 17 ರಂದು ಶಿರಸಿಯಲ್ಲಿ ರಾಜ್ಯಮಟ್ಟದ ಅರಣ್ಯವಾಸಿಗಳ ರ‍್ಯಾಲಿ ಸಂಘಟಿಸಲಾಗಿರುವ ಹಿನ್ನೆಲೆಯಲ್ಲಿ, ಅಸಮರ್ಪಕ ಜಿಪಿಎಸ್ ಮೇಲ್ಮನವಿ ಅಭಿಯಾನ ಹಾಗೂ ಅರಣ್ಯ ಸಿಬ್ಬಂದಿಗಳಿ0ದ ಉಂಟಾಗುತ್ತಿರುವ ದೌರ್ಜನ್ಯ, ಕಿರುಕುಳ ಕುರಿತು ಚರ್ಚಿಸಲಾಗುವುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD

     ಕಾರಣ, ಆಸಕ್ತ ಅರಣ್ಯ ಅತಿಕ್ರಮಣದಾರರು ಜೋಯಿಡಾ ತಾಲೂಕ ಅರಣ್ಯ ಅತಿಕ್ರಮಣದಾರರ ಸಭೆಗೆ ಹಾಜರಾಗಲು ರವೀಂದ್ರ ನಾಯ್ಕ ಕೋರಿದ್ದಾರೆ.

    Share This
    300x250 AD
    300x250 AD
    300x250 AD
    Back to top