ಶಿರಸಿ: ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ವತಿಯಿಂದ ನೇರ್ಲವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಗಣಪತಿ ಈಶ್ವರ ಹೆಗಡೆ, ಮಧುರವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಮಧುಕೇಶ್ವರ ಎನ್. ನಾಯ್ಕ, ಗುಡ್ನಾಪುರ ಹಾಲು ಉತ್ಪಾದಕರ ಸಹಕಾರ ಸಂಘದ ದೇವಮ್ಮ ಹನುಮಂತ ನಾಯ್ಕ ಇವರ ಆಕಳುಗಳು ಮರಣ ಹೊಂದಿದ ಕಾರಣ ಜಾನುವಾರು ವಿಮಾ ಯೋಜನೆಯ ಅಡಿಯಲ್ಲಿ ತಲಾ ರೂ. 45,000/-, ರೂ.32,000/-ರೂ.32,000/-ಮೊತ್ತದ ಚೆಕ್’ಗಳನ್ನು ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ನೌಕರರ ಕಲ್ಯಾಣ ಸಂಘದ ಅಧ್ಯಕ್ಷರಾದ ಸುರೇಶ್ಚಂದ್ರ ಕೃಷ್ಣ ಹೆಗಡೆ ಕೆಶಿನ್ಮನೆ ಹಾಗೂ ಧಾರವಾಡ, ಗದಗ ಮತ್ತು ಉತ್ತರ ಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ನಿರ್ದೇಶಕರಾದ ಶಂಕರ ಪರಮೇಶ್ವರ ಹೆಗಡೆ ಇವರುಗಳು ಶಿರಸಿ ಉಪವಿಭಾಗದ ಕಚೇರಿಯಲ್ಲಿ ವಿತರಿಸಿದರು.
ಈ ಸಂದರ್ಭದಲ್ಲಿ ಧಾರವಾಡ, ಗದಗ ಮತ್ತು ಉತ್ತರಕನ್ನಡ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ., ಧಾರವಾಡದ ಉತ್ತರಕನ್ನಡ ಜಿಲ್ಲೆಯ ಶೇಖರಣೆ ಮತ್ತು ತಾಂತ್ರಿಕ ವಿಭಾಗ ಹಾಗೂ ಮಾರುಕಟ್ಟೆ ವಿಭಾಗದ ಮುಖ್ಯಸ್ಥರಾದ ಎಸ್.ಎಸ್.ಬಿಜೂರ್, ವಿಸ್ತರಣಾಧಿಕಾರಿ ಮೌನೇಶ ಎಂ. ಸೋನಾರ, ಶಿರಸಿ ಉಪವಿಭಾಗದ ಗುರುದರ್ಶನ ಭಟ್, ವಿಸ್ತರಣಾ ಸಮಾಲೋಚಕರುಗಳಾದ ಅಭಿಷೇಕ ನಾಯ್ಕ, ಜಯಂತ ಪಟಗಾರ, ಜಾನುವಾರು ವಿಮಾ ಯೋಜನೆಯ ಫಲಾನುಭವಿಗಳು ಹಾಗೂ ಹಾಲು ಉತ್ಪಾದಕರು ಉಪಸ್ಥಿತರಿದ್ದರು.