Slide
Slide
Slide
previous arrow
next arrow

ಡಾ.ಹೆಗ್ಗಡೆಯವರಿಂದ ಸಂಘಗಳ ಮೂಲಕ ಧಾರ್ಮಿಕ ಜಾಗೃತಿ: ಶಾಸಕಿ ರೂಪಾಲಿ

300x250 AD

ಕಾರವಾರ: ಧಾರ್ಮಿಕ ಜಾಗೃತಿ ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಆಗಬೇಕಾಗಿರುತ್ತದೆ. ಈ ನಿಟ್ಟಿನಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಸ್ವಸಹಾಯ ಸಂಘಗಳ ಒಕ್ಕೂಟಗಳ ಮೂಲಕ ಬಹಳ ಅದ್ಭುತವಾಗಿ ಈ ಕಾರ್ಯ ಮಾಡುತ್ತಿದ್ದಾರೆ. ಇದನ್ನು ಗುರುತಿಸಿದ ಕೇಂದ್ರ ಸರ್ಕಾರ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ ಎಂದು ಶಾಸಕಿ ರೂಪಾಲಿ ನಾಯ್ಕ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಸದಾಶಿವಗಡ ವಲಯದ ಪ್ರಗತಿಬಂಧು ಸ್ವ ಸಹಾಯ ಸಂಘಗಳ ಒಕ್ಕೂಟ ಮಾಜಾಳಿ, ಅಸ್ನೋಟಿ, ಆಚಾರಿವಾಡಾ, ದೇವಬಾಗ, ಹೋಸಾಳಿ, ಮುಡಗೇರಿ, ಕನಸಗೇರಿ, ವಾಂಗಡ, ಗೋಟ್ನಿಬಾಗ, ಬಾವಳ ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಸಂಯಕ್ತ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮದಲಿ ಅವರು ಮಾತನಾಡಿದರು.
ಕರಾವಳಿ ಪ್ರಾದೇಶಿಕ ವಿಭಾಗದ ಪ್ರಾದೇಶಿಕ ನಿರ್ದೇಶಕ ವಸಂತ ಸಾಲಿಯಾನ ಮಾತನಾಡಿ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ಧರ್ಮಾಧಿಕಾರಿಗಳ ಮಾರ್ಗದರ್ಶನದಲ್ಲಿ ಎಲ್ಲಾ ರಂಗಗಳಲ್ಲಿಯೂ ಕೆಲಸ ಮಾಡುತ್ತಿದೆ. ಸ್ವ ಸಹಾಯ ಸಂಘದ ಸದಸ್ಯರಿಗೆ ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಿಸಿ ಕಡಿಮೆ ಬಡ್ಡಿ ದರದಲ್ಲಿ ಬಂಡವಾಳದ ವ್ಯವಸ್ಥೆ ಮಾಡುತ್ತಿದೆ. ಸ್ವ ಸಹಾಯ ಸಂಘದಲ್ಲಿ ಸದಸ್ಯರಾಗಿರುವವರ ಬಡ ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ಒದಗಿಸುತ್ತಿದೆ. ನಿರ್ಗತಿಕರಿಗೆ ಮಾಶಾಸನ ಒದಗಿಸುತ್ತಿದೆ. ವಿಕಲಚೇತನರಿಗೆ ಸಲಕರಣೆ ಒದಗಿಸುತ್ತಿದೆ. ಪರಿಸರಕ್ಕೆ ಪೂರಕವಾದ ಹಸಿರು ಇಂಧನ ಕಾರ್ಯಕ್ರಮದಡಿಯಲ್ಲಿ ಸ್ವ ಸಹಾಯ ಸಂಘದಲ್ಲಿರುವ ಸದಸ್ಯರಿಗೆ ರಿಯಾಯತಿ ದರದಲ್ಲಿ ಸೋಲಾರ ಮತ್ತು ಗ್ರೀನ್ ವೇ ಒಲೆಗಳನ್ನು ಒದಗಿಸುತ್ತದೆ. ಹೀಗೆ ಧಾರ್ಮಿಕ ಜಾಗೃತಿಗಾಗಿ ಮತ್ತು ಜನರಲ್ಲಿ ಒಗ್ಗಟ್ಟೂ ಶ್ರದ್ಧಾ ಭಕ್ತಿ ಮೂಡಿಸುವ ನಿಟ್ಟಿನಲ್ಲಿ ಈ ಸಾಮೂಹಿಕ ಸತ್ಯನಾರಾಯಣ ಪೂಜೆಯನ್ನು ಆಚರಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಉಪವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೋಡ ಮಾತನಾಡಿ, ಶಿಸ್ತಿಗೆ ಇನ್ನೊಂದು ಹೆಸರು ಧರ್ಮಸ್ಥಳ. ಒಂದೇ ವೇದಿಕೆ ಅಡಿಯಲ್ಲಿ 184 ದಂಪತಿಯನ್ನು ಸಾಮೂಹಿಕ ಸತ್ಯನಾರಾಣ ಪೂಜೆಯಲ್ಲಿ ಪಾಲ್ಗೊಳ್ಳುವಂತೆ ಮಾಡಿಸುವುದು ವೀರೇಂದ್ರ ಹೆಗ್ಗಡೆ ಯವರ ಅದ್ಭುತ ಶಕ್ತಿ. ಸರ್ಕಾರ ಮಾಡಬೇಕಾದ ಕೆಲಸಗಳನ್ನು ಪೂಜ್ಯರು ಮಾಡುತ್ತಿದ್ದಾರೆ. ಇಂದು ತಾವೆಲ್ಲರೂ ಶ್ರದ್ಧಾಭಕ್ತಿಯಿಂದ ಪಾಲ್ಗೊಂಡಿರುವ ಈ ಕಾರ್ಯಕ್ರಮದಲ್ಲಿ ನನಗೆ ಭಾಗವಹಿಸಲು ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಭಾಗ್ಯ ಎಂದು ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ಗಂಗಾಧರ ಭಟ್, ಪ್ರಸ್ತುತ ದಿನಗಳಲ್ಲಿ ಜನರಿಗೆ ದೇವರು, ಧರ್ಮ ಈ ಬಗ್ಗೆ ಆಸಕ್ತಿ ಕಡಿಮೆಯಾಗಿದೆ. ಆದ್ದರಿಂದ ಇಂದು ಸಮಾಜದಲ್ಲಿ ಅಹಿತಕರ ಘಟನೆಗಳು ನಡೆಯುತ್ತಿವೆ. ಪ್ರತಿಯೊಬ್ಬ ವ್ಯಕ್ತಿಯಲ್ಲಿಯೂ ಆತ್ಮ ಜಾಗೃತಿ ಆದಾಗ ಸ್ವಾಸ್ಥ್ಯ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಪೂಜ್ಯ ಧರ್ಮಾಧಿಕಾರಿಗಳು ಸ್ವ ಸಹಾಯ ಸಂಘಗಳ ಮೂಲಕ ಸಾಮೂಹಿಕ ಸತ್ಯನಾರಾಯಣ ಪೂಜೆಯಂತಹ ಬೃಹತ್ ಕಾರ್ಯಕ್ರಮವನ್ನು ಆಯೋಜನೆ ಮಾಡುವ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಕಾಪಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮಾಜಾಳಿ ಗ್ರಾಂ.ಪ0. ಅಧ್ಯಕ್ಷ ಕೃಷ್ಣ ಮ್ಹಾಳಸೇಕರ, ಮುಡಗೇರಿ ಗ್ರಾಂ.ಪA. ಅಧ್ಯಕ್ಷೆ ಸೀಮಾ ನಾಯ್ಕ, ಚಿತ್ತಾಕುಲಾ ಗ್ರಾ.ಪಂ. ಅಧ್ಯಕ್ಷೆ ಸ್ವಾತಿ ದೇಸಾಯಿ, ಅಸ್ನೋಟಿ ಗ್ರಾ.ಪಂ. ಅಧ್ಯಕ್ಷಕ್ಷೆ ಪೂಜಾ ಕೊಠಾರಕರ, ವಿಶ್ವಕರ್ಮ ಲೋಹಮಥ್ ಮಾಜಾಳಿ ಅಧ್ಯಕ್ಷ ರಮಾಕಾಂತ ಆಚಾರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಸುಜಾತಾ ವೆರ್ಣೇಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಜನಾಧಿಕಾರಿ ವಿನಾಯಕ ನಾಯ್ಕ ಕಾರ್ಯಕ್ರಮಕ್ಕೆ ಸ್ವಾಗತಿಸಿದರು. ಕೃಷಿ ಮೇಲ್ವಿಚಾರಕ ಕೃಷ್ಣ, ಮೇಲ್ವಿಚಾರಕ ಸಂತೋಷ, ಜ್ಞಾನವಿಕಾಸ ಸಮನ್ವಯಾಧಿಕಾರಿ ಸುಜಾತಾ ಕಾರ್ಯಕ್ರಮವನ್ನು ನಿರೂಪಿಸಿದರು. ಮೇಲ್ವಿಚಾರಕ ನಾಗರಾಜ ಕಾರ್ಯಕ್ರಮಕ್ಕೆ ವಂದಿಸಿದರು. ಸೇವಾಪ್ರತಿನಿಧಿಗಳಾದ ಪ್ರತಿಕ್ಷಾ, ರೇಷ್ಮಾ, ಜ್ಯೋತಿ, ಸೀತಾ, ಶೀತಲ್, ಅಮಿತಾ, ಶ್ವೇತಾ, ಸೈದಮ್ಮಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಶೌರ್ಯ ಘಟಕದ ಸ್ವಯಂ ಸೇವಕ ರವಿಕಾಂತ ನಾಯ್ಕ ಮತ್ತು ಅವರ ತಂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

300x250 AD
Share This
300x250 AD
300x250 AD
300x250 AD
Back to top