ಯಲ್ಲಾಪುರ: ಇತ್ತೀಚೆಗೆ ಸುರಿದ ಭಾರಿ ಮಳೆಗೆ ಹಳ್ಳದಲ್ಲಿ ಬಿದ್ದು ಕೊಚ್ಚಿ ಹೋಗಿ ಮೃತಪಟ್ಟಿದ್ದ ತಾಲೂಕಿನ ಹಾಸಣಗಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಬ್ಬಿನಗದ್ದೆ ಗ್ರಾಮದ ಆನಂದ ಮೊಗೇರ್ ಅವರ ಕುಟುಂಬದವರಿಗೆ ಭಾನುವಾರ ಹಾಸಣಗಿ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ 5 ಲಕ್ಷ ರೂಪಾಯಿಗಳ ಪರಿಹಾರ ಧನ ಚೆಕ್‍ನ್ನು ವಿತರಿಸಿ, ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯ ಶಾಂತಾರಾಮ ಸಿದ್ದಿ, ತಾಲ್ಲೂಕು ಪಂಚಾಯ್ತಿ ಮಾಜಿ ಉಪಾಧ್ಯಕ್ಷೆ ಸುಜಾತಾ ಸಿದ್ದಿ, ಕಂಪ್ಲಿ, ಹಾಸಣಗಿ ಗ್ರಾಮ ಪಂಚಾಯ್ತಿ ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ಹಾಗೂ ಗ್ರಾಮಸ್ಥರು, ಕಾರ್ಯಕರ್ತರು ಉಪಸ್ಥಿತರಿದ್ದರು.