ಯಲ್ಲಾಪುರ: ಪಟ್ಟಣದ ವಿಶ್ವದರ್ಶನ ಪದವಿಪೂರ್ವ ಕಾಲೇಜಿನ ಮಂಗಳವಾರ ಪೊಲೀಸ್ ಠಾಣೆ ಸಹಯೋಗದಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಪಿಎಸ್‌ಐ ಮಂಜುನಾಥ್ ಗೌಡರ್, ರಸ್ತೆ ಸುರಕ್ಷತೆ, ಸೈಬರ್ ಅಪರಾಧದ ಬಗ್ಗೆ ಅನುಸರಿಸಬೇಕಾದ ಜಾಗೃತೆ, ಮಕ್ಕಳ ಸುರಕ್ಷತೆ, ಪೊಲೀಸ್ ನೇಮಕಾತಿ ಯಾವ ರೀತಿಯಲ್ಲಿ ನಡೆಯುತ್ತದೆ. ಇಆರ್‌ಎಸ್‌ಎಸ್ 112 ವಾಹನದ ಪ್ರಯೋಜನ ಪಡೆಯುವುದು ಹೇಗೆ, ಮಕ್ಕಳ ಸಹಾಯವಾಣಿ 1098 ವಿಷಯ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಮಾಹಿತಿ ನೀಡಿದರು.
ಪ್ರೊಬೆಷನರಿ ಪಿಎಸ್‌ಐ ಉದಯ್ ಬಿ. ಹಾಗೂ ಸಿಬ್ಬಂದಿಗಳಾದ ಅಮರ ಜಿ. ಪಾಲ್ಗೊಂಡು ವಿಶ್ವದರ್ಶನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ವಿಶ್ವದರ್ಶನ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ನರಸಿಂಹ ಕೋಣೆಮನೆ ಸಾಂದರ್ಭಿಕವಾಗಿ ಮಾತನಾಡಿದರು. ಸಂಸ್ಥೆಯ ವ್ಯವಸ್ಥಾಪಕರಾದ ಗುರುರಾಜ ಕುಂದಾಪುರ, ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ದತ್ತಾತ್ರೇಯ ಗಾಂವ್ಕರ, ಕನ್ನಡ ಮಾಧ್ಯಮ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಮುಕ್ತಾ ಶಂಕರ ವೇದಿಕೆಯಲ್ಲಿದ್ದರು. ವಿದ್ಯಾರ್ಥಿಗಳಾದ ದೀಕ್ಷಾ ಹೆಗಡೆ ಪ್ರಾರ್ಥಿಸಿದರು. ಪೃಥ್ವಿ ಗಾಂವ್ಕರ್ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದಳು.