• first
    second
    third
    previous arrow
    next arrow
  • Trending Now

    SSLC ಫಲಿತಾಂಶ; ಶಿರಸಿ ಶೈಕ್ಷಣಿಕ ಜಿಲ್ಲೆಯ ಮೂರು ಬಾಲಕಿಯರು, ಕಾರವಾರದ ಓರ್ವ ವಿದ್ಯಾರ್ಥಿ ರಾಜ್ಯಕ್ಕೆ ಪ್ರಥಮ

    300x250 AD

    ಕಾರವಾರ: ಜುಲೈ 19 ಮತ್ತು 22ಕ್ಕೆ ನಡೆದಿದ್ದ 2020-21 ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು, ಶಿರಸಿ ಶೈಕ್ಷಣಿಕ ಜಿಲ್ಲೆಯ ಮೂವರು ವಿದ್ಯಾರ್ಥಿಗಳು ಹಾಗೂ ಕಾರವಾರ ಶೈಕ್ಷಣಿಕ ಜಿಲ್ಲೆಯ ಒಬ್ಬ ವಿದ್ಯಾರ್ಥಿ ಶೇ.ನೂರರ ಸಾಧನೆ(625ಕ್ಕೆ 625) ಮಾಡಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.


    ಕಾರವಾರ ಶೈಕ್ಷಣಿಕ ಜಿಲ್ಲೆಯ ಹೊನ್ನಾವರದ ಗೇರುಸೊಪ್ಪ ಸರ್ಕಾರಿ ಪ್ರಾಥಮಿಕ ಫ್ರೌಡಶಾಲೆಯ ಭೂಮಿಕ ಕೃಷ್ಣ ನಾಯ್ಕ 625 ಅಂಕಕ್ಕೆ 625 ಅಂಕ ಗಳಿಸುವ ಮೂಲಕ ಸಾಧನೆ ಮಾಡಿದ್ದಾರೆ.

    300x250 AD


    ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ ಸಿದ್ದಾಪುರದ ಪ್ರಶಾಂತಿ ವಿದ್ಯಾನಿಕೇತನದ ವಿದ್ಯಾರ್ಥಿನಿ ಹೇಮಾ ಉಮೇಶ ಹೆಗಡೆ ಹಾಗೂ ಸಿದ್ದಾಪುರದ ಕಾನಸೂರಿನ ಕಾಳಿಕಾ ಭವಾನಿ ಪ್ರೌಢಶಾಲೆಯ ಎಸ್.ಎನ್.ಸುನೈ ಮತ್ತು ರೇಷ್ಮಾ ಹೆಗಡೆ 625 ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.
    ಕಳೆದ ಬಾರಿ ಓರ್ವ ವಿದ್ಯಾರ್ಥಿನಿ, ಈ ಬಾರಿ ಮೂವರು ವಿದ್ಯಾರ್ಥಿಗಳು 625 ಅಂಕ ಪಡೆದು ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದು ಕಾರವಾರ ಶೈಕ್ಷಣಿಕ ಜಿಲ್ಲೆಯಲ್ಲಿ ಓರ್ವ ವಿದ್ಯಾರ್ಥಿನಿ ಸಾಧನೆ ಮಾಡಿದ್ದಾಳೆ.

    Share This
    300x250 AD
    300x250 AD
    300x250 AD
    Leaderboard Ad
    Back to top