• Slide
    Slide
    Slide
    previous arrow
    next arrow
  • ವೆಂಕಟೇಶ ನಾಯ್ಕಗೆ ಕೆಎಸ್‌ಆರ್‌ಟಿಸಿ ನೌಕರರ ಕೂಟದ ಸನ್ಮಾನ

    300x250 AD

    ಶಿರಸಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷರಾಗಿ ಆಯ್ಕೆಯಾದ ಸಾಮಾಜಿಕ ಧುರೀಣ ಡಾ.ವೆಂಕಟೇಶ ನಾಯ್ಕ ಅವರನ್ನು ರಸ್ತೆ ಸಾರಿಗೆ ಸಂಸ್ಥೆಯ ನೌಕರರ ಕೂಟದಿಂದ ಸನ್ಮಾನಿಸಿ ಗೌರವಿಸಲಾಯಿತು.
    ನಗರದ ಮಧುವನ ಹೋಟೆಲ್ ಆರಾಧನಾ ಸಭಾಭವನದಲ್ಲಿ ನಡೆದ ಒಕ್ಕೂಟದ ಸಭೆಯಲ್ಲಿ ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ವೆಂಕಟೇಶ ನಾಯ್ಕ, ಪ್ರತಿನಿತ್ಯ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ ಸಾರಿಗೆ ನೌಕಕರು ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ಅವರ ಸಮಸ್ಯೆಗಳಿಗೆ ಶಾಶ್ವತ ಪರಿಹಾರದ ಅವಶ್ಯಕತೆ ಇದ್ದು, ಸಾರಿಗೆ ಕಾರ್ಮಿಕರನ್ನು ಸರಕಾರಿ ನೌಕರರೆಂದು ಪರಿಗಣಿಸುವ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಒಮ್ಮತದ ಅಭಿಪ್ರಾಯದೊಂದಿಗೆ ಸಂಘಟನಾತ್ಮಕವಾಗಿ ಸರಕಾರವನ್ನು ಆಗ್ರಹಿಸಬೇಕಿದೆ ಎಂದರು.
    ಈಗಾಗಲೇ ಸಮಸ್ಯೆ ಬಗೆಹರಿಸುವಂತೆ ಹಲವಾರು ಬಾರಿ ಸರಕಾರಕ್ಕೆ ಮನವಿ ಸಲ್ಲಿಸಲಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ಸರಕಾರ ಈ ಕುರಿತು ಚರ್ಚೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ಇದೆ ಎಂದರು.
    ನಂತರ ಮಾತನಾಡಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ ಆರ್.ಚಂದ್ರಶೇಖರ್, ಬೇಡಿಕೆ ಈಡೇರಿಕೆಗಾಗಿ ವಿವಿಧ ಜಿಲ್ಲೆ ವಿಭಾಗಗಳ ವ್ಯಾಪ್ತಿಯಲ್ಲಿ ಕೈಗೊಳ್ಳಲಾದ ಪ್ರಯತ್ನದ ಕುರಿತು ವಿವರಿಸಿದರು. ಈ ಹಿಂದೆ ಸರಕಾರ ನಮ್ಮ ಬೇಡಿಕೆ ಈಡೇರಿಸುವ ಕುರಿತು ಲಿಖಿತವಾಗಿ ನೀಡಿದ ಆಶ್ವಾಶನೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ, ಬೆಳಗಾವಿ ಅಧಿವೇಶನದ ವೇಳೆ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಲಾಗಿದೆ ಎಂದರು.
    ಈ ಸಂದರ್ಭದಲ್ಲಿ ವಿಭಾಗದ ಅಧ್ಯಕ್ಷ ವಾಸುದೇವಯ್ಯ ನೆಲ್ಲೂರು, ಪ್ರಧಾನ ಕಾರ್ಯದರ್ಶಿ ಕೃಷ್ಣಾ ಸಣ್ಮನೆ, ಖಜಾಂಚಿ ಹರೀಶ ಬಿ.ಜೆ., ಕಾನೂನು ಸಲಹೆಗಾರ ಜಿ.ಆರ್.ಹೆಗಡೆ, ಉಪಾಧ್ಯಕ್ಷ ಮಲ್ಲಿಕಾರ್ಜುನ, ಸಹಕಾರ್ಯದರ್ಶಿ ಆನಂದ ಎಂ. ಇನ್ನಿತರರು ಇದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top