ಅಂಕೋಲಾ: ಕರ್ನಾಟಕ ರಾಜ್ಯ ಅಥ್ಲೆಟಿಕ್ಸ್ ಸಂಸ್ಥೆ ಹಾಗೂ ತುಮಕೂರು ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಆಶ್ರಯದಲ್ಲಿ ಡಿ.15ರಂದು ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ 57ನೇ ಕರ್ನಾಟಕ ರಾಜ್ಯ ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್ ನಡೆಯಲಿದೆ.
ಈ ಚಾಂಪಿಯನ್‌ಶಿಪ್‌ನಲ್ಲಿ ಆಯ್ಕೆಯಾದ ಸ್ಪರ್ಧಾಳುಗಳು 7 ಮತ್ತು 8 ಜನವರಿ 2022 ರಂದು ಅಸ್ಸಾಂ ರಾಜ್ಯದ ಕಾಜೀರಂಗ್ ನ್ಯಾಷನಲ್ ಪಾರ್ಕ್ನಲ್ಲಿ ನಡೆಯಲಿರುವ ರಾಷ್ಟ್ರೀಯ ಕ್ರಾಸ್ ಕಂಟ್ರಿ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುವ ಅರ್ಹತೆಯನ್ನು ಪಡೆಯಲಿದ್ದಾರೆ. ಯು-20, 18, 16 ಬಾಲಕ ಮತ್ತು ಬಾಲಕಿಯರು ಹಾಗೂ ಪುರುಷ ಮತ್ತು ಮಹಿಳೆಯರ ವಿಭಾಗದಲ್ಲಿ ಸ್ಪರ್ಧೆಗಳು ನಡೆಯಲಿವೆ. ಭಾಗವಹಿಸುವ ಕ್ರೀಡಾ ಪಟುಗಳಿಗೆ AFI-UID ಕಡ್ಡಾಯವಾಗಿರುತ್ತದೆ. ಪ್ರವೇಶವನ್ನು ಪಡೆಯಲು ಡಿ.12 ಕೊನೆಯ ದಿನಾಂಕವಾಗಿರುತ್ತದೆ.
ಈ ಸ್ಪರ್ಧೆಗಳಲ್ಲಿ ಭಾಗವಹಿಸಲಿಚ್ಛಿಸುವ ಜಿಲ್ಲೆಯ ಕ್ರೀಡಾಪಟುಗಳು ಡಿಸ್ಟ್ರಿಕ್ಟ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಉತ್ತರ ಕನ್ನಡ ಇವರ ಕಾರ್ಯದರ್ಶಿ ಕೆ.ಆರ್.ನಾಯಕ ಬೇಲೆಕೇರಿ (ಮೊ.ಸಂ: 9845846351) ಅವರನ್ನು ಸಂಪರ್ಕಿಸುವoತೆ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.