ಯಲ್ಲಾಪುರ: ಮನುವಿಕಾಸ ಸಂಸ್ಥೆಯು ಈಡಲ್ ಗೀವ್ ಫೌಂಡೇಶನ್ ಮತ್ತು ದಲ್ಯಾನ್ ಫೌಂಡೇಶನ್ ಸಹಯೋಗದೊಂದಿಗೆ ಸ್ವ ಸಹಾಯ ಸಂಘದ ಮಹಿಳೆಯರಿಗಾಗಿ ಡಿ.11ರಂದು 11 ಗಂಟೆಗೆ ಎಪಿಎಂಸಿ ರೈತ ಸಭಾಭವನದಲ್ಲಿ ಒಂದು ದಿನದ ಮಹಿಳಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಮನುವಿಕಾಸ ಸಂಸ್ಥೆಯು ಒಂದು ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಯಾಗಿದ್ದು, 2003ನೇ ಇಸ್ವಿಯಲ್ಲಿ ನೋಂದಣಿಗೊ0ಡು ಶಿಕ್ಷಣ, ಪರಿಸರ ಮತ್ತು ಗ್ರಾಮೀಣ ಅಭಿವೃದ್ಧಿ ಕ್ಷೇತ್ರದಲ್ಲಿ ಉತ್ತರ ಕನ್ನಡ, ಶಿವಮೊಗ್ಗ, ಹಾವೇರಿ, ಧಾರವಾಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಬಡತನ ನಿವಾರಣೆ, ಮಹಿಳಾ ಸಬಲೀಕರಣ, ನೈಸರ್ಗಿಕ ಸಂಪನ್ಮೂಲಗಳ ಸಮರ್ಪಕ ನಿರ್ವಹಣೆ, ಉದ್ಯೋಗ ಸೃಷ್ಟಿ, ಆರೋಗ್ಯ ಸೇವೆ ಮತ್ತಿತರ ಗ್ರಾಮೀಣಾಭಿವೃದ್ಧಿಗೆ ಸಂಬಂಧಿಸಿದ ವಿಷಯಗಳ ಕುರಿತು ಸಂಸ್ಥೆಯು ಕಾರ್ಯ ನಿರ್ವಹಿಸುತ್ತಿದೆ.
ಸಂಸ್ಥೆಯು ಈಡಲ್ ಗೀವ್ ಫೌಂಡೇಶನ್, ಮತ್ತು ದಲ್ಯಾನ್ ಫೌಂಡೇಶನ್ ಸಹಯೋಗದೊಂದಿಗೆ ಸ್ವ ಸಹಾಯ ಸಂಘದ ಮಹಿಳೆಯರಿಗಾಗಿ ಒಂದು ದಿನದ ಮಹಿಳಾ ಸಮಾವೇಶವನ್ನು ಹಮ್ಮಿಕೊಂಡಿದೆ. ಕಾರ್ಯಕ್ರಮದಲ್ಲಿ ಮಹಿಳೆಯರು ತಮ್ಮ ವಿಚಾರಧಾರೆಗಳನ್ನು ಪರಸ್ಪರ ವಿನಿಮಯ ಮಾಡಿಕೊಳ್ಳಲು ಮುಕ್ತ ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಮನುವಿಕಾಸ ಸಂಸ್ಥೆಯ ನಿರ್ದೇಶಕ ಗಣಪತಿ ಭಟ್ಟ ತಿಳಿಸಿದ್ದಾರೆ.
ಡಿ.11ರಂದು ಮನುವಿಕಾಸ ಸಂಸ್ಥೆಯಿಂದ ಮಹಿಳಾ ಸಮಾವೇಶ
