ಕಾರವಾರ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ 2022ನೇ ಸಾಲಿನ ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ಹೈನುಗಾರಿಕೆ ಘಟಕದಡಿ ಒಂದು ಮಿಶ್ರತಳಿ ಹಾಲು ಕರೆಯುವ ಹಸು, ಎಮ್ಮೆ ನೀಡಲಾಗುವುದು. ಈ ಕಾರ್ಯಕ್ರಮದಡಿ ಘಟಕ ವೆಚ್ಚ ರೂ.60,000 ಇದ್ದು ಶೇ 90 ರೂ.54000 ಸಹಾಯಧನ ಹಾಗೂ 10+1 ಕುರಿ, ಮೇಕೆ ಈ ಕಾರ್ಯಕ್ರಮದಡಿ ಘಟಕ ವೆಚ್ಚ ರೂ.66,000 ಇದ್ದು ಶೇ 90 ರೂ.59400ಗಳ ಸಹಾಯಧನ ಒದಗಿಸಲಾಗುವುದು. ಘಟಕದ ಸಹಾಯಧನ ಹೊರತುಪಡಿಸಿ ಉಳಿದ ಮೊತ್ತವನ್ನು ಫಲಾನುಭವಿಗಳ ವಂತಿಕೆ ಅಥವಾ ಸಾಲದ ರೂಪದಲ್ಲಿ ಬ್ಯಾಂಕಿನಿ0ದ ಪಡೆಯಬಹುದಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ, ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಕೂಲಿ ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡವರನ್ನು ಆಯ್ಕೆ ಮಾಡಲಾಗುವುದು. ಸರ್ಕಾರದ ನಿಯಮಗಳಂತೆ ಮಹಿಳೆಯರಿಗೆ ಶೇ.33.3 ಮತ್ತು ಅಂಗವಿಕಲರಿಗೆ ಶೇ 3ರಷ್ಟು ಆದ್ಯತೆ ನೀಡಲಾಗುವುದು.
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳು ತಮ್ಮ RD ಸಂಖ್ಯೆ ಇರುವ ಜಾತಿ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ಫಲಾನುಭವಿಗಳನ್ನು ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು. ಆಸಕ್ತಿಯುಳ್ಳವರು ಆಯಾ ತಾಲೂಕಿನ ಪಶುವೈದ್ಯ ಆಸ್ಪತ್ರೆಗಳಿಂದ ಅರ್ಜಿಯನ್ನು ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಡಿ.30ರೊಳಗೆ ತಾಲೂಕಾ ಪಶುವೈದ್ಯ ಆಸ್ಪತ್ರೆಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಪಶುಪಾಲನೆ ಮತ್ತು ಪಶುವೈದ್ಯ ಸೇವೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.