ಕಾರವಾರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಡಿ.15ರಂದು ಬೆಳ್ಳಿಗೆ 9.30ಕ್ಕೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಕ್ತಿಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ದಿನಾಚರಣೆಯ ಪ್ರಯುಕ್ತ ಹಿರಿಯ ನಾಗರಿಕರಿಗೆ ಕೆಲವು ಕ್ರೀಡೆಗಳನ್ನು ಆಯೋಜಿಸಲಾಗಿದೆ. ರಿಂಗನ್ನು ಬಕೆಟ್‌ನಲ್ಲಿ ಎಸೆಯುವುದು, ಮ್ಯೂಸಿಕಲ್ ಚೇರ್, ಏಕಪಾತ್ರಾಭಿನಯ, ಗಾಯನಸ್ಪರ್ಧೆ ಮತ್ತು ಚಿತ್ರಕಲೆ ಸ್ಪರ್ಧೆಯನ್ನು 60ರಿಂದ 69 ವರ್ಷ , 70ರಿಂದ 79 ವರ್ಷ ಹಾಗೂ 80 ವರ್ಷ ಮೇಲ್ಪಟ್ಟ ವಯೋಮಾನದ ಮೂರು ತಂಡಗಳಾಗಿ ಏರ್ಪಡಿಸಿ ಪುರುಷ ಹಾಗೂ ಮಹಿಳೆಯರಿಗೆ ಪ್ರತ್ಯೇಕವಾಗಿ ಕ್ರೀಡೆಗಳನ್ನು ಆಯೋಜಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವ ಹಿರಿಯ ನಾಗರಿಕರು ಡಿ.10ರ ಮಧ್ಯಾಹ್ನ 12.30ರ ಒಳಗೆ ತಮ್ಮ ಆಧಾರ್ ಕಾರ್ಡ್ ಝೆರಾಕ್ಸ್ ಪ್ರತಿಯೊಂದಿಗೆ ಕಾರವಾರದ ಶಿಶು ಅಭಿವೃದ್ಧಿ ಯೋಜನೆ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಲು ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382296073 ಗೆ ಸಂಪರ್ಕಿಸಬಹುದಾಗಿದೆ.