ಯಲ್ಲಾಪುರ: ಅರಣ್ಯವಾಸಿಗಳ ಸಮಸ್ಯೆಗಳ ಪರಿಹಾರಕ್ಕೆ ಸರಕಾರದ ಮೇಲೆ ಒತ್ತಡ ತರುವ ಹಿನ್ನೆಲೆಯಲ್ಲಿ ಶಿರಸಿಯಲ್ಲಿ ಡಿ. 17 ರಂದು ಹಮ್ಮಿಕೊಳ್ಳಲಾದ ರಾಜ್ಯ ಮಟ್ಟದ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಗೆ ಪೂರ್ವಭಾವಿಯಾಗಿ ಜಾಗೃತ ಪಥ ಸಂಚಲನ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಯಲ್ಲಾಪುರ ತಾಲೂಕಿನ ಕಿರವತ್ತಿಯಲ್ಲಿ ಜರುಗಿತು.
ಬೃಹತ್ ಪ್ರಮಾಣದಲ್ಲಿ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿಗೆ ಅತಿಕ್ರಮಣದಾರರಲ್ಲಿ ಜಾಗೃತೆ ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಐತಿಹಾಸಿಕ ರ‍್ಯಾಲಿ ಜರುಗಿಸುವ ಪೂರ್ವತಯಾರಿಯಲ್ಲಿ ಹೋರಾಟಗಾರರ ವೇದಿಕೆಯು ಸನ್ನದ್ಧವಾಗಿದೆ ಎಂದು ಅಧ್ಯಕ್ಷ ರವಿಂದ್ರ ನಾಯ್ಕ ಈ ಸಂದರ್ಭದಲ್ಲಿ ತಿಳಿಸಿತು.
ಕಾರ್ಯಕ್ರಮದಲ್ಲಿ ತಾಲೂಕ ಅಧ್ಯಕ್ಷ ಭೀಮ್ಸಿ ವಾಲ್ಮೀಕಿ, ನೂರಹಮ್ಮದ್, ಸೈಯದ್‌ಸಾಬ ಬಡೆಸಾಬ ನದಾಫ್, ಥಾಮಸ್ ಜೊಸೆಫ್ ಕಲಘಟಗಿ, ಲಲಿತ ನಾರಾಯಣ ನಾಯ್ಕ ಮುಂತಾದವರು ಉಪಸ್ಥಿತರಿದ್ದರು.