ಯಲ್ಲಾಪುರ: ಭಾರತೀಯ ಯೂಥ್ ಕಾಂಗ್ರೆಸ್ ಸಂಸ್ಥಾಪನ ದಿನದ ಅಂಗವಾಗಿ ಮಂಗಳವಾರ ಶಿರಸಿಯ ಪಂಡಿತ್ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಉತ್ತರಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕುಮಾರ್ ಜೋಶಿ ನೇತೃತ್ವದಲ್ಲಿ ಹಣ್ಣು ಹಂಪಲು ಮತ್ತು ಬ್ರೆಡ್ ನೀಡಿ ಶೀಘ್ರ ಗುಣಮುಖರಾಗಲೆಂದು ಹಾರೈಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ರೈತ ವಿಭಾಗದ ರಾಜ್ಯ ಕಾರ್ಯದರ್ಶಿ ಶ್ರೀಪಾದ್ ಹೆಗಡೆ ಕಡವೆ, ಜಿಲ್ಲಾ ಕಾಂಗ್ರೆಸ್ ಮಾಧ್ಯಮ ವಕ್ತಾರ ದೀಪಕ್ ದೊಡ್ದುರು, ಶಿರಸಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಗಣೇಶ್ ದಾವಣಗೆರೆ, ಯುವ ಕಾಂಗ್ರೆಸ್ ಲೋಕಸಭಾ ಕ್ಷೇತ್ರದ ಮಾಜಿ ಅಧ್ಯಕ್ಷ ನಾಗರಾಜ್ ಮಡಿವಾಳ್, ಶ್ರೀಧರ್ ಹೆಗಡೆ ಹಲಸರಿಗೆ, ಗಣಪತಿ ನಾಗ್ ಹಾಗೂ ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.