Slide
Slide
Slide
previous arrow
next arrow

ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ

300x250 AD

ಯಲ್ಲಾಪುರ: ಅಂಗವಿಕಲರಿಗೆ ಮೊದಲ ಆದ್ಯತೆ ನೀಡಿ ಎಲ್ಲ ಸೌಕರ್ಯಗಳನ್ನು ಕಲ್ಪಿಸಬೇಕು. ಈ ಬಗ್ಗೆ ನಾನು ಎಲ್ಲ ಸ್ಥಳೀಯ ವಿಧಾನ ಪರಿಷತ್ ಸದಸ್ಯರಿಗೆ ಸೂಚನೆ ನೀಡಿದ್ದು, ಶಾಂತರಾಮ್ ಸಿದ್ದಿ ಅವರ ಅನುದಾನದಲ್ಲಿ ಹತ್ತು ವಾಹನಗಳು ಅಂಗವಿಕರಿಗೆ ಲಭ್ಯವಾಗಿರುವುದು ಸಂತಸದ ಸಂಗತಿ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದರು.

ತಾಲೂಕು ಪಂಚಾಯತಿ ಗಾಂಧಿಕುಟೀರದ ಬಳಿ ವಿಧಾನ ಪರಿಷತ್ ಸದಸ್ಯರ ೨೦೨೧-೨೨ನೇ ಸಾಲಿನ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ಯಂತ್ರಚಾಲಿತ ವಾಹನ ವಿತರಣಾ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ವಾಹನವನ್ನು ಹತ್ತಾಂತರಿಸಿ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ಶಾಂತರಾಮ ಸಿದ್ದಿ ಮಾತನಾಡಿ, ಎಲ್ಲ ವರ್ಗದ ಅಂಗವಿಕಲರಿಗೆ ಅವರ ಅಗತ್ಯತೆಗೆ ಅನುಗುಣವಾಗಿ ವಾಹನ ಕೊಡುವ ಕೆಲಸವನ್ನು ಮಾಡುತ್ತಿದ್ದೇವೆ. ಎಲ್ಲ ಕಾರ್ಯಕ್ಕೆ ಸಹಕಾರ ನೀಡಿದ ಸಚಿವ ಶಿವರಾಮ ಹೆಬ್ಬಾರ್ ಅವರಿಗೆ ಇದೇ ಸಂದರ್ಭದಲ್ಲಿ ಕೃತಜ್ಞತೆಯನ್ನು ಸಲ್ಲಿಸಿದರು.

300x250 AD

ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತ ವಿಜಯ ಮರಾಶಿ, ಉದ್ಯಮಿ ಬಾಲಕೃಷ್ಣ ನಾಯಕ, ಇನ್ನಿತರ ಅಧಿಕಾರಿಗಳು ಇದ್ದರು.

Share This
300x250 AD
300x250 AD
300x250 AD
Back to top