• Slide
    Slide
    Slide
    previous arrow
    next arrow
  • ಮಕ್ಕಳ ಕಲೆ ಅಳೆಯಲು ಪ್ರತಿಭಾ ಕಾರಂಜಿ: ಶಾಂತಲಾ ನಾಡಕರ್ಣಿ

    300x250 AD

    ಅಂಕೋಲಾ: ಮಕ್ಕಳಲ್ಲಿ ಅಡಗಿರುವ ಪ್ರತಿಭೆ ಹೊರ ತರಲು ಪ್ರತಿಭಾ ಕಾರಂಜಿ ಉತ್ತಮ ವೇದಿಕೆ. ಈ ವೇದಿಕೆ ಮೂಲಕ ಮಕ್ಕಳ ಕಲೆ ಮತ್ತು ಸಾಂಸ್ಕೃತಿಕ ಮೌಲ್ಯಗಳನ್ನು ಅಳೆದು ಪ್ರೋತ್ಸಾಹಿಸಲು ಉತ್ತಮ ಅವಕಾಶ ಎಂದು ಪುರಸಭಾ ಅಧ್ಯಕ್ಷೆ ಶಾಂತಲಾ ನಾಡಕರ್ಣಿ ಹೇಳಿದರು.

    ಅವರು ಪಟ್ಟಣದ ಸತ್ಯಾಗ್ರಹ ಸ್ಮಾರಕ ಭವನದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು ಉದ್ಘಾಟಿಸಿ ಮಾತನಾಡಿ, ಮಕ್ಕಳು ಕಡ್ಡಾಯವಾಗಿ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಮನಸ್ಸು ಅರಳಿಸಿಕೊಳ್ಳುವತ್ತ ಗಮನ ಹರಿಸಬೇಕು ಎಂದರು.

    300x250 AD

    ತಾ.ಪಂ ಆಡಳಿತಾಧಿಕಾರಿ ನಾಗೇಶ ರಾಯ್ಕರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ ಕಾರ್ಯನಿರ್ವಹಣಾಧಿಕಾರಿ ಪಿ.ವೈ.ಸಾವಂತ, ಪುರಸಭಾ ಮುಖ್ಯಾಧಿಕಾರಿ ಎನ್.ಎಂ.ಮೇಸ್ತಾ, ಡಿಡಿಪಿಐ ಈಶ್ವರ ನಾಯ್ಕ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಲಕ್ಷ್ಮೀ ಪಾಟೀಲ ಸೇರಿದಂತೆ ಪ್ರೌಡ ಮತ್ತು ಪ್ರಾಥಮಿಕ ವಿಭಾಗದ ಪದಾಧಿಕಾರಿಗಳು ಇದ್ದರು.

    Share This
    300x250 AD
    300x250 AD
    300x250 AD
    Leaderboard Ad
    Back to top