ಕಾರವಾರ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳಲ್ಲಿ ಸ್ನಾತಕೋತ್ತರ ಮತ್ತು ವೃತ್ತಿಪರ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸ್ನಾತಕೋತ್ತರ ಮತ್ತು ವೃತ್ತಿಪರ ಕೋರ್ಸಿನ ವಿದ್ಯಾರ್ಥಿಗಳಿಗೆ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ್ರಜಾತಿ, ಪ.ವರ್ಗ ಮತ್ತು ಇತರೆ ಜನಾಂಗಳಿಗೆ ಸೇರಿದ ವಿದ್ಯಾರ್ಥಿಗಳಿಗಾಗಿ 2022-23 ಸಾಲಿನ ಪ್ರವೇಶಾತಿ ಕಲ್ಪಿಸಲು ಈಗಾಗಲೇ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ 19 ರವರೆಗೆ ವಿಸ್ತರಿಸಲಾಗಿದೆ. ಅರ್ಹ ಅಭ್ಯರ್ಥಿಗಳು ನಿಗದಿತ ಅವಧಿಯಲ್ಲಿ ಅರ್ಜಿ ಸಲ್ಲಿಸಿ ಇದರ ಸದುಪಯೋಗ ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382226589 ಗೆ ಸಂಪರ್ಕಿಸಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.