ಕಾರವಾರ: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ನಿರುದ್ಯೋಗ ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿಯಲ್ಲಿ 30 ದಿನಗಳ ಲಘು ಮತ್ತು ಭಾರಿ ವಾಹನ ಚಾಲನಾ ತರಬೇತಿಯನ್ನು ಹಮ್ಮಿಕೊಂಡಿದೆ.
ತರಬೇತಿಯು ಕರ್ನಾಟಕ ರಾಜ್ಯ ಸಾರಿಗೆ ನಿಗಮ, ಪ್ರಾದೇಶಿಕ ತರಬೇತಿ ಕೇಂದ್ರ ತೇಗೂರು, ಚಿಕ್ಕಮಗಳೂರು ಇಲ್ಲಿ ನೀಡಲಾಗುವುದು. ತರಬೇತಿಯು ಊಟ ಮತ್ತು ವಾಸತಿಯೊಂದಿಗೆ ಉಚಿತವಾಗಿರುತ್ತದೆ. ಆಸಕ್ತ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಲಘು ವಾಹನ ಚಾಲನಾ ತರಬೇತಿಗಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಆದಾಯ ಹಾಗೂ ಜಾತಿ ಪ್ರಮಾಣ ಪತ್ರ, ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಕನಿಷ್ಠ 18 ವರ್ಷ, ಗರಿಷ್ಠ 35 ವರ್ಷ ಮೀರದ, 8 ಪಾಸ್ ಪೋರ್ಟ್ ಅಳತೆಯ ಫೋಟೋಗಳು ಹಾಗೂ ವಾಹನ ಚಾಲನಾ ತರಬೇತಿಗಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಆಧಾರ್ ಕಾರ್ಡ್, ಚಾಲ್ತಿಯಲ್ಲಿರುವ ಆದಾಯ ಹಾಗೂ ಜಾತಿ ಪ್ರಮಾಣ ಪತ್ರ, ಲಘು ವಾಹನ ಚಾಲನಾ ಪರವಾನಿಗೆ ಪಡೆದು ಕನಿಷ್ಠ 1 ವರ್ಷ ಪೂರ್ಣಗೊಳಿಸಿರುವ, ಅರ್ಜಿ ಸಲ್ಲಿಸುವ ದಿನಾಂಕಕ್ಕೆ ಕನಿಷ್ಠ 21 ವರ್ಷ ಗರಿಷ್ಠ 30 ವರ್ಷ ಮೀರದ, 8 ಪಾಸ್ ಪೋರ್ಟ್ ಅಳತೆಯ ಫೋಟೋಗಳು ಮುಂತಾದ ದಾಖಲೆಗಳೊಂದಿಗೆ http://www.kaushalkar.com ವೆಬ್‌ಸೈಟ್‌ನಲ್ಲಿ ನೊಂದಣಿ ಮಾಡಿಕೊಳ್ಳಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9481156580, 8861421475, 8310799359 ಗೆ ಸಂಪರ್ಕಿಸಿ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.