Slide
Slide
Slide
previous arrow
next arrow

ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಶಾಸಕ ವಿ.ಎಸ್.ಪಾಟೀಲ್, ಶ್ರೀನಿವಾಸ್ ಧಾತ್ರಿ

300x250 AD

ಬೆಂಗಳೂರು: ಯಲ್ಲಾಪುರದ ಮಾಜಿ ಶಾಸಕ ವಿ.ಎಸ್.ಪಾಟೀಲ್ ಹಾಗೂ ಸಾಮಾಜಿಕ ಕಾರ್ಯಕರ್ತ ಶ್ರೀನಿವಾಸ್ ಭಟ್ ಧಾತ್ರಿ ಅವರು ಬಿಜೆಪಿ ತೊರೆದು ಗುರುವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಹಾಗೂ ಹಿರಿಯ ಮುಖಂಡ ಆರ್.ವಿ. ದೇಶಪಾಂಡೆ ಅವರು ಪಕ್ಷದ ಧ್ವಜ ನೀಡುವ ಮೂಲಕ ವಿ.ಎಸ್. ಪಾಟೀಲ್ ಹಾಗೂ ಶ್ರೀನಿವಾಸ್ ಭಟ್ ದಾತ್ರಿ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಈ ಸಂಧರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ವಿ.ಎಸ್.ಪಾಟೀಲ್ ಅವರು ನಮ್ಮ ಜತೆ ವಿಧಾನಸಭೆಯಲ್ಲಿ ಕೆಲಸ ಮಾಡಿದ್ದಾರೆ. ಅಬ್ದುಲ್ ಕಲಾಂ ಅವರು ರಾಷ್ಟ್ರಪತಿ ಆಗಿದ್ದ ಸಂದರ್ಭದಲ್ಲಿ ಇವರಿಗೆ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಿ, ಗೌರವಿಸಿದ್ದರು. ಅವರ ತಂದೆ ಕೂಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಇವರು ಕೂಡ ಪಕ್ಷದ ವಿವಿಧ ಸಂಘಟನೆಗಳಲ್ಲಿ ಕೆಲಸ ಮಾಡಿದ್ದರು. ಮಧ್ಯೆ ಬಿಜೆಪಿ ಸೇರಿ, ಸ್ಪರ್ಧಿಸಿದ್ದರು. ಆಪರೇಷನ್ ಕಮಲದಲ್ಲಿ ನಮ್ಮ ಶಾಸಕರು ಹೋದ ನಂತರ ಆಯಾ ಕ್ಷೇತ್ರದ ಬಹುತೇಕ ಬಿಜೆಪಿ ನಾಯಕರು ನಮ್ಮ ಪಕ್ಷಕ್ಕೆ ಒಬ್ಬೊಬ್ಬರಾಗಿ ಬರುತ್ತಿದ್ದಾರೆ. ಇತ್ತೀಚೆಗೆ ಹಿರೇಕೆರೂರು ನಾಯಕರು ಸೇರ್ಪಡೆಯಾಗಿದ್ದಾರೆ. ಬಿಜೆಪಿಯ ರಾಜ್ಯ ಕಾರ್ಯಕಾರಣಿ ಸಮಿತಿಯಲ್ಲಿ ಕೆಲಸ ಮಾಡಿದ್ದಾರೆ. ಸಹಕಾರ ಸಂಘಗಳಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಎನ್‌ಡಬ್ಲ್ಯೂಆರ್‌ಟಿಸಿ ಚೇರ್ಮನ್ ಆಗಿದ್ದರು. ಇವರು ನಮ್ಮ ಪಕ್ಷದ ಸಿದ್ಧಾಂತ, ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆ, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಒಪ್ಪಿ ಪಕ್ಷಕ್ಕೆ ಬಂದಿದ್ದಾರೆ. ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್, ಸ್ಥಳೀಯ ನಾಯಕರ ಜತೆ ಚರ್ಚೆ ಮಾಡಿ ಎಲ್ಲ ನಾಯಕರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದೇವೆ ಎಂದರು.

ಇನ್ನು ಬಿಜೆಪಿಯ ಸಕ್ರಿಯ ನಾಯಕರಾದ ಜಿಲ್ಲಾ ಖಜಾಂಚಿ, ಉದ್ಯಮಿ ಶ್ರೀನಿವಾಸ್ ಭಟ್ ಧಾತ್ರಿ ಅವರು ಕೂಡ ಪಕ್ಷ ಸೇರ್ಪಡೆಯಾಗಿದ್ದಾರೆ. ಇವರು ಉತ್ತಮ ಸಂಘಟನಕಾರರಾಗಿದ್ದು, ಬಹಳ ಸೇವೆ ಮಾಡಿರುವ ಕುಟುಂಬದಿ0ದ ಬಂದಿದ್ದಾರೆ. ಯಲ್ಲಾಪುರ ಕ್ಷೇತ್ರದ ಯುವಕರಲ್ಲಿ ಬಹಳ ಚಿರಪರಿಚಿತರಾಗಿದ್ದಾರೆ. ಅವರು ಕೂಡ ದೇಶಪಾಂಡೆ ಹಾಗೂ ನನ್ನನ್ನು ಭೇಟಿ ಮಾಡಿ ಪಕ್ಷ ಸೇರುವ ಇಂಗಿತ ವ್ಯಕ್ತಪಡಿಸಿದ್ದರು. ಇವರು ಕೂಡ ಹಲವು ಸಂಘ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆ. ಅವರು ಕೂಡ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಇವರು ಸಲ್ಲಿಸಿದ ಅರ್ಜಿ ಮೇಲೆ ನಾವೆಲ್ಲರೂ ಚರ್ಚೆ ಮಾಡಿ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದೇವೆ ಎಂದರು.

ಇನ್ನು ಬಹಳ ಅರ್ಜಿಗಳು ಬಾಕಿ ಇವೆ. ಇಂದು ಇನ್ನಿಬ್ಬರು ನಾಯಕರನ್ನು ಪಕ್ಷಕ್ಕೆ ಸೇರಿಸಿಕೊಳ್ಳಬೇಕಾಗಿತ್ತು, ಅವರ ಆರೋಗ್ಯ ಸರಿ ಇಲ್ಲದ ಕಾರಣ ಸೇರ್ಪಡೆ ಕಾರ್ಯಕ್ರಮ ಮುಂದೂಡಿದ್ದೇವೆ. ಕೆಲವರು ಅಧಿವೇಶನ ಮುಗಿಯಲಿ ಎಂದು ಕಾಯುತ್ತಿದ್ದಾರೆ. ನಾವು ಮುಂದಿನ ದಿನಗಳಲ್ಲಿ ಪ್ರತಿವಾರ ಸಭೆ ಮಾಡಿ ಒಬ್ಬೊಬ್ಬರನ್ನೇ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ. ಈ ಮಧ್ಯೆ ನಮ್ಮ ಪ್ರವಾಸಗಳು ನಿಗದಿಯಾಗಿವೆ. ಈ ಪ್ರವಾಸ ಸಂದರ್ಭದಲ್ಲಿ ಕೆಲವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು ಎಂದರು.

ಕೋಟ್…

ನಾನು ಹಾಗೂ ಸಿದ್ದರಾಮಯ್ಯ ಇಬ್ಬರೂ ಸೇರಿ ರಾಜ್ಯದ 20 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದೇವೆ. ಭಾರತ ಜೋಡೋ ಯಾತ್ರೆ ಸಾಗದ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಾಗುವುದು. ಈ ಪ್ರವಾಸದ ನಂತರ 224 ಕ್ಷೇತ್ರಗಳಲ್ಲೂ ಪ್ರತ್ಯೇಕವಾಗಿ ಪ್ರವಾಸ ಮಾಡುತ್ತೇವೆ. ಉತ್ತರ ಕರ್ನಾಟಕದಲ್ಲಿ ಸಿದ್ದರಾಮಯ್ಯನವರು ಹಾಗೂ ದಕ್ಷಿಣ ಭಾಗದಲ್ಲಿ ನಾನು ಪ್ರವಾಸ ಮಾಡುತ್ತೇನೆ. ನಂತರ ಅವರು ದಕ್ಷಿಣ, ನಾನು ಉತ್ತರ ಭಾಗದ ಜಿಲ್ಲೆಗಳಿಗೆ ಹೋಗುತ್ತೇನೆ. ಈ ಪ್ರವಾಸದಲ್ಲಿ ನಮ್ಮ ಪಕ್ಷದ ಎಲ್ಲ ಹಿರಿಯ ನಾಯಕರು ಭಾಗವಹಿಸುತ್ತಾರೆ.

· ಡಿ.ಕೆ.ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ

300x250 AD

ಬೇಸರ ತೋಡಿಕೊಂಡ ವಿ.ಎಸ್.ಪಾಟೀಲ್:

ಬಿಜೆಪಿಯಿಂದ ದೂರಾಗುವುದನ್ನು ತಿಳಿದುಕೊಂಡ ಮಾಜಿ ಸಿಎಂ ಜಗದೀಶ ಶೆಟ್ಟರ್ ಹೊರತುಪಡಿಸಿ ಯಾರೂ ನÀಮ್ಮನ್ನು ಸಂಪರ್ಕ ಮಾಡಿಲ್ಲ. ಹೈಕಮಾಂಡ್ ಜತೆ ಮಾತಾಡುತ್ತೇನೆ ಎಂದ ಜಗದೀಶ ಶೆಟ್ಟರ್ ಅವರೂ ಮತ್ತೆ ಕರೆ ಮಾಡಲೇ ಇಲ್ಲ ಎಂದು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರಿದ ಮಾಜಿ ಶಾಸಕ ವಿ.ಎಸ್.ಪಾಟೀಲ್ ಬೇಸರ ತೋಡಿಕೊಂಡರು.

ನಾನು 2008ರಿಂದ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಾ ಬಂದಿದ್ದೇನೆ. 2008ರಲ್ಲಿ ಶಾಸಕನಾಗಿದ್ದೆ. ನಾನು ಬಿಜೆಪಿ ಸೇರಿದ ಮೇಲೆ ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಸೇರಿದರು. ನಾನು ಆರ್.ವಿ ದೇಶಪಾಂಡೆ ವಿರುದ್ಧ 2004ರಲ್ಲಿ ಸೋಲು ಕಂಡೆ. 2008ರಲ್ಲಿ ಕ್ಷೇತ್ರ ವಿಂಗಡಣೆ ಬಳಿಕ ಜಯ ಆಗಿತ್ತು. 2013, 2018ರಲ್ಲಿ ಸೋಲು ಕಂಡಿದ್ದೆ. ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ 17 ಜನ ಬಂದಾಗ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಸ್ವಾಗತ ಮಾಡಿ ಕರೆದುಕೊಂಡೆವು. ಆದರೆ ಮೂರು ವರ್ಷದಿಂದ ಆತ್ಮೀಯತೆಯಿಂದ ನಡೆಸಿಕೊಳ್ಳಲಿಲ್ಲ. ನಮ್ಮ ಆತ್ಮೀಯರಿಗೂ ತೊಂದರೆ ಕೊಡುತ್ತಿದ್ದರು. ಕ್ಯಾಬಿನೆಟ್ ದರ್ಜೆ, ನಿಗಮದ ಅಧ್ಯಕ್ಷನಾಗಿದ್ದೆ. ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ರೋಡ್ ಹಾಕಿಸಿದ್ದೆ. ಅದನ್ನೂ ಕ್ಯಾನ್ಸಲ್ ಮಾಡಿದ್ದರು. ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ ಎಂದು ಸಚಿವ ಶಿವರಾಂ ಹೆಬ್ಬಾರ್ ವಿರುದ್ಧ ವಾಗ್ದಾಳಿ ನಡೆಸಿದರು.

ಯಾವುದೇ ಕಂಡೀಷನ್ ಹಾಕಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಲ್ಲ. ಸರ್ವೆ ಮಾಡಿ ಟಿಕೆಟ್ ಕೊಡುತ್ತಾರೆ. ಯಾರಿಗೆ ಟಿಕೆಟ್ ಕೊಟ್ಟರೂ ದುಡಿಯುತ್ತೇವೆ. ಜಗದೀಶ್ ಶೆಟ್ಟರ್ ಒಬ್ಬರು ನನ್ನ ಸಂಪರ್ಕ ಮಾಡಿದ್ದರು. ಯಾಕೆ ಹಿಂಗ್ ಮಾಡುತ್ತೀಯ ಎಂದರು. ನಾನು ಹೈಕಮಾಂಡ್ ಜತೆಗೆ ಮಾತಾಡುತ್ತೇನೆ ಎಂದು ಹೇಳಿದ್ದರು. ಇದಾದ ಮೇಲೆ ಮತ್ತೆ ಏನೂ ಹೇಳಿಲ್ಲ. ಜಗದೀಶ್ ಶೆಟ್ಟರ್ ಬಿಟ್ಟರೆ ಯಾರೂ ನಮ್ಮನ್ನು ಸಂಪರ್ಕ ಮಾಡಿಲ್ಲ ಎಂದರು.

ಶಾಸಕರ ದುರ್ನಡತೆಯಿಂದ ಬೇಸತ್ತು ಕಾಂಗ್ರೆಸ್‌ಗೆ: ಶ್ರೀನಿವಾಸ ಭಟ್

ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇದೆ. ಜತೆಗೆ ನಮ್ಮ ಶಾಸಕರು ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ. ಪಕ್ಷದಲ್ಲಿದ್ದುಕೊಂಡು ಏನೂ ಕೆಲಸ ಮಾಡಲು ಆಗದ ಸ್ಥಿತಿಯಿತ್ತು. ಹಾಗಾಗಿ ನಾವು ಕಾಂಗ್ರೆಸ್ ಪಕ್ಷ ಸೇರಿದ್ದೇವೆ. ಇಲ್ಲಿ ಕಾಂಗ್ರೆಸ್ ಶಾಸಕರನ್ನು ಸ್ಥಾಪನೆ ಮಾಡಬೇಕು ಎಂದು ಸೇರಿದ್ದೇವೆ. ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಅಲ್ಲಿರುವಂತಹ ಶಾಸಕರ ದುರ್ನಡತೆಯನ್ನು, ಉಸಿರುಗಟ್ಟುವ ವಾತಾವರಣ ಬದಲಿಸಬೇಕು ಎಂದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದೇನೆ ಎಂದು ಶ್ರೀನಿವಾಸ್ ಭಟ್ ಹೇಳಿದರು.

Share This
300x250 AD
300x250 AD
300x250 AD
Back to top