• Slide
  Slide
  Slide
  previous arrow
  next arrow
 • ಹಿರೇಗುತ್ತಿ ಹೈಸ್ಕೂಲ್ ಜೀವ ವೈವಿಧ್ಯತೆ ದಾಖಲೀಕರಣದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

  300x250 AD

  ಕುಮಟಾ: ಸೆಂಟ್ರಲ್ ಫಾರ್ ಇಕೋಲಾಜಿಕಲ್ ಸೈನ್ಸ್ ಭಾರತೀಯ ವಿಜ್ಞಾನ ಸಂಸ್ಥೆ ಕುಮಟಾ ಇವರ ಸಹಯೋಗದೊಂದಿಗೆ ನಡೆದ ಜಿಲ್ಲಾ ಮಟ್ಟದ ಜೀವ ವೈವಿಧ್ಯತೆ ದಾಖಲೀಕರಣ ಸ್ಪರ್ಧೆಯಲ್ಲಿ ಹಿರೇಗುತ್ತಿ ಹೈಸ್ಕೂಲ್ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

  ವಿಜ್ಞಾನ ಶಿಕ್ಷಕ ಮಹಾದೇವ ಬೊಮ್ಮು ಗೌಡ ಇವರ ಮಾರ್ಗದರ್ಶನದಲ್ಲಿ ಸುವರ್ಣ ಎಮ್ ಭಂಡಾರಕರ್ ಮತ್ತು ಸಾನಿಕಾ ಜೆ ನಾಯ್ಕ ಇವರು ದಾಖಲಿಸಿದ ಔಷಧಿ ಸಸ್ಯಗಳ ಕುರಿತು ವಿವರಿಸಿ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಆಯ್ಕೆಯಾಗಿ ರಾಜ್ಯಮಟ್ಟದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯ ಮಟ್ಟದ ಸ್ಪರ್ಧೆ ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರಿನಲ್ಲಿ ನಡೆಯಲಿದೆ.

  300x250 AD

  ಆಯ್ಕೆಯಾದ ವಿದ್ಯಾರ್ಥಿಗಳಿಗೆ ಹಾಗೂ ಮಾರ್ಗದರ್ಶಕ ಶಿಕ್ಷಕರಿಗೆ ಮಹಾತ್ಮ ಗಾಂಧೀ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಹೊನ್ನಪ್ಪ ನಾಯಕ, ಉಪಾಧ್ಯಕ್ಷ ಶ್ರೀಕಾಂತ ನಾಯಕ, ಕಾರ್ಯದರ್ಶಿ ಮೋಹನ ಕೆರೆಮನೆ, ಸದಸ್ಯರು, ಮುಖ್ಯಾಧ್ಯಾಪಕರಾದ ರೋಹಿದಾಸ ಗಾಂವಕರ, ಶಿಕ್ಷಕ ವೃಂದದವರು, ಆಶ್ರಯ ಫೌಂಡೇಶನ್ ಅಧ್ಯಕ್ಷರಾದ ರಾಜೀವ ಗಾಂವಕರ, ಗ್ರಾಮ ಪಂಚಾಯತ ಅಧ್ಯಕ್ಷರಾದ ನಾಗರತ್ನ ಗಾಂವಕರ, ಗ್ರಾಮ ಪಂಚಾಯತ ಉಪಾಧ್ಯಕ್ಷರಾದ ಶಾಂತಾ ಎನ್ ನಾಯಕ, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ನೀಲಕಂಠ ನಾಯಕ, ಬ್ರಹ್ಮ ಜಟಕ ಯುವಕ ಸಂಘದ ಅಧ್ಯಕ್ಷರಾದ ಜಗದೀಶ ನಾಯಕ, ಸ್ಪಂದನ ಫೌಂಡೇಶನ್‌ನ ಎನ್.ರಾಮು ಹಿರೇಗುತ್ತಿ, ಊರ ನಾಗರಿಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆೆ, ಕೇತ್ರ ಶಿಕ್ಷಣಾಧಿಕಾರಿಗಳು ಅಭಿನಂದನೆ ಸಲ್ಲಿಸಿ ಮುಂದಿನ ಹಂತಕ್ಕೆ ಶುಭಹಾರೈಸಿದ್ದಾರೆ.

  Share This
  300x250 AD
  300x250 AD
  300x250 AD
  Leaderboard Ad
  Back to top