Slide
Slide
Slide
previous arrow
next arrow

ಕ್ರೀಡೆ ಸ್ಪರ್ಧೆಯ ಸಂಕೇತವಲ್ಲ, ಬಾಂಧವ್ಯ-ಸಾಮರಸ್ಯತೆಗೆ ಪ್ರೇರಕ: ಉಪೇಂದ್ರ ಪೈ

300x250 AD

ಶಿರಸಿ : ಕ್ರೀಡೆ ಸ್ಪರ್ಧೆಯ ಸಂಕೇತವಲ್ಲ. ಬಾಂಧವ್ಯ, ಸಾಮರಸ್ಯತೆಗೆ ಪ್ರೇರಕ. ಅದು ದೈಹಿಕ ಸಾಮರ್ಥ್ಯವನ್ನು ಹೆಚ್ಚಿಸುವ ಶಕ್ತಿ ಹೊಂದಿದ್ದು, ಸಮಾಜದಲ್ಲಿನ ಏಕತೆಗೆ ಪ್ರತೀಕವಾಗಿದೆ ಎಂದು ಉಪೇಂದ್ರ ಪೈ ಸೇವಾ ಟ್ರಸ್ಟ್ ಅಧ್ಯಕ್ಷ ಉಪೇಂದ್ರ ಪೈ ಹೇಳಿದರು ಅವರು ನಗರದ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉತ್ತರ ಕನ್ನಡ ವಿಭಾಗದ ಅಧಿಕಾರಿ, ಸಿಬ್ಬಂದಿಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಸರ್ಕಾರಿ ನೌಕರರ ಪ್ರಥಮ ವರ್ಷದ ಹಾರ್ಡ್ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ “ಎಫ್ ಎ ರೋಡ್ರಿಗ್ಸ ಕಪ್” 2022 ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಮೀಣ ಕ್ರೀಡೆಯಲ್ಲಿ ಸಂಸ್ಕೃತಿಯು ಒಳಗೊಳ್ಳುವುದಿಂದ ಇಲ್ಲಿನ ಕ್ರೀಡೆಗಳಿಗೆ ಪ್ರೋತ್ಸಾಹ ಅಗತ್ಯ. ಸತತ ಪರಿಶ್ರಮದಿಂದ ಗ್ರಾಮೀಣ ಪಟುಗಳು ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಬೇಕು. 

ಯುವಕರು ಕ್ರೀಡಾ ಮನೋಭಾವನೆ ಬೆಳೆಸಿಕೊಳ್ಳಬೇಕು. ಕ್ರೀಯಾತ್ಮಕ ಚಟುವಟಿಕೆಗಳಲ್ಲಿ ಸದಾ ತೊಡಗಿಸಿಕೊಳ್ಳಬೇಕು. ಕ್ರೀಡೆಯಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಲು ಸಾಧ್ಯ. ಕ್ರೀಡೆ ಯುವಜನರ ಚೇತನವಾಗಬೇಕು. ಮೊಬೈಲ್ ಬಳಕೆ ಕಡಿಮೆಮಾಡಿಕೊಂಡು ಅದರಿಂದ ಆಗುವ ದುಷ್ಪರಿಣಾಮದಿಂದ ದೂರವಿರಬೇಕು ಎಂದರು.

300x250 AD

ಇಂದಿನ ಪರಿಸ್ಥಿತಿಯಲ್ಲಿ ಕೆಲವು ಯುವಕರು ಮಾದಕ, ಮದ್ಯಪಾನ, ಧೂಮಪಾನ ಚಟಗಳಿಗೆ ಬಲಿಯಾಗುತ್ತಿದ್ದಾರೆ. ಹೆತ್ತವರು ಮಕ್ಕಳ ಮೇಲೆ ಅನೇಕ ಕನಸುಗಳನ್ನು ಇಟ್ಟುಕೊಂಡಿದ್ದಾರೆ. ಪೋಷಕರ ಕನಸುಗಳಿಗೆ ತೊಂದರೆ ಮಾಡದಂತೆ ಯುವಕರು ಎಚ್ಚರವಹಿಸಬೇಕು ಎಂದು ಹೇಳಿದರು. ಈ ಸಂಧರ್ಬದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಉತ್ತರ ಕನ್ನಡ ವಿಭಾಗದ ಅಧಿಕಾರಿ /ಸಿಬ್ಬಂದಿಗಳು, ಕ್ರೀಡಾ ಅಭಿಮಾನಿಗಳು ಹಾಗೂ ಟ್ರಸ್ಟಿನ ಸದಸ್ಯರು ಉಪಸ್ಥಿತರಿದ್ದರು. 

Share This
300x250 AD
300x250 AD
300x250 AD
Back to top