ಕಾರವಾರ: ಜಿಲ್ಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಅಭಿವೃದ್ದಿಪಡಿಸಲು ಹಾಗೂ ಶಾಲೆಗಳಲ್ಲಿ ಕೈತೋಟವನ್ನು ಸಮೃದ್ಧವಾಗಿ ಅಭಿವೃದ್ದಿಪಡಿಸಲು ಹೆಚ್ಚಿನ ಗುರಿಯನ್ನು ರೂಪಿಸಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಪಿ.ಹೇಮಲತ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಮಾಸಿಕ ಕೆಡಿಪಿ ಹಾಗೂ ಸಾಮಾನ್ಯ ಪರಿಶೀಲನೆ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಆಯಾ ಇಲಾಖೆಗಳ ಹೊಸ ಯೋಜನೆಗಳ ಬೇಡಿಕೆಗಳನ್ನು ಅದರ ಮಾರ್ಗಸೂಚಿಯಲ್ಲಿ ಪೂರೈಸಲಾಗುತ್ತದೆ ಅದಕ್ಕೆ ತಕ್ಕ ಗುರಿಯನ್ನು ಇಟ್ಟುಕೊಳ್ಳಿ ಎಂದರು. ಮುಂದಿನ ಸಭೆಯಲ್ಲಿ ಇಲಾಖೆಗಳ ಬೇಡಿಕಗಳು ಹಾಗೂ ಅವರುಗಳು ಕೈಕೊಂಡ ಅಭಿವೃದ್ದಿಯನ್ನು ಪರಿಶೀಲಿಸಲು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.
ಇದೆ ಸಂದರ್ಭದಲ್ಲಿ ಕೃಷಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ , ಅಕ್ಷರ ದಾಸೋಹ, ತೋಟಗಾರಿಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಪಶುಪಾಲನ, ಸಮಾಜ ಕಲ್ಯಾಣ, ಸಾರ್ವಜನಿಕ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಅಲ್ಪಸಂಖ್ಯಾತರ, ಹಿಂದುಳಿದ ವರ್ಗಗಳ ಕಲ್ಯಾಣ, ಜಿಲ್ಲಾ ಕೈಗಾರಿಕಾ ಕೇಂದ್ರ, ಕೈಮಗ್ಗ ಮತ್ತು ಜವಳಿ ಇಲಾಖೆ , ಅಂಬೇಡ್ಕರ ನಿಗಮ ಇಲಾಖೆಗಳ ಪ್ರಗತಿ ಪರಿಶೀಲನೆಯನ್ನು ನಡೆಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕಧಿಕಾರಿ ಈಶ್ವರ ಖಂಡೂ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.