• Slide
  Slide
  Slide
  previous arrow
  next arrow
 • ಸೌಲಭ್ಯ ಉಪಯೋಗಿಸಿಕೊಂಡು ವಿದ್ಯಾರ್ಥಿ ಜೀವನವನ್ನು ಸಾರ್ಥಕಪಡಿಸಿಕೊಳ್ಳಲು ಶಾಸಕರ ಕರೆ

  300x250 AD

  ಕುಮಟಾ: ವಿದ್ಯಾರ್ಥಿಗಳು ಕಠಿಣ ಪರಿಶ್ರಮಿಗಳಾಗಿರಬೇಕು. ಕಾಲೇಜಿನ ಎಲ್ಲ ಸೌಲಭ್ಯದ ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕೆಂದು ಶಾಸಕ ದಿನಕರ ಶೆಟ್ಟಿ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
  ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸರ್ಕಾರ ವಿದ್ಯಾರ್ಥಿಗಳಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.ಇಂತಹ ಯೋಜನೆಗಳನ್ನು ಬಳಸಿಕೊಂಡು ಭವಿಷ್ಯ ರೂಪಿಸಿಕೊಳ್ಳುವಂತೆ ಸಲಹೆ ನೀಡಿದರು.
  ನಿವೃತ್ತ ಪ್ರಾಂಶುಪಾಲ ಡಾ.ಗಿರೀಶ್ ಕುಚಿನಾಡ್ ಅವರು ವಿದ್ಯಾರ್ಥಿಗಳಿಗೆ ಅವಶ್ಯಕ ವಾದ ಸೂಕ್ತ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯರಾದ ವಿಜಯಾ ಡಿ.ನಾಯ್ಕ, ಪುರಸಭೆ ಸದಸ್ಯ ಸಂತೋಷ ನಾಯ್ಕ,ಕಾಲೇಜು ಅಭಿವೃದ್ಧಿ ಸದಸ್ಯರಾದ ಗಜಾನನ ಶೆಟ್ಟಿ, ಗಣಪತಿ ಹೆಗಡೆ ಹಾಗೂ ವಿದ್ಯಾರ್ಥಿ ಕಲ್ಯಾಣಾಧಿಕಾರಿ ಐ.ಕೆ.ನಾಯ್ಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಚಾಲಕರಾದ ಮೂರ್ತಿ, ಐಆರ್‌ಐಕ್ಯೂಎಸಿ ಸಂಚಾಲಕರಾದ ಡಾ.ರಮ್ಯಶ್ರೀ ಎಂ.ಜಿ ಹಾಗೂ ವಿವಿಧ ಸಾಂಸ್ಕೃತಿಕ ವಿಭಾಗಗಳ ಸಂಚಾಲಕರು ಹಾಗೂ ವಿದ್ಯಾರ್ಥಿ ಪ್ರತಿನಿಧಿಗಳಾದ ವಿನಾಯಕ, ಕೀರ್ತಿ ಭಾಗವಹಿಸಿದ್ದರು.

  300x250 AD
  Share This
  300x250 AD
  300x250 AD
  300x250 AD
  Leaderboard Ad
  Back to top