• first
    second
    third
    previous arrow
    next arrow
  • ಸರ್ಕಾರಿ ಕಾರ್ಯಕ್ರಮದಲ್ಲಿ ಹಾರ-ತುರಾಯಿ, ನೆನೆಪಿನ ಕಾಣಿಕೆ ಬಳಕೆಗಿಲ್ಲ ಅವಕಾಶ; ಸಿಎಂ ಬೊಮ್ಮಾಯಿ

    300x250 AD

    ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ರವರ ನಿರ್ದೇಶನದಂತೆ ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಯಾವುದೇ ರೀತಿಯ ಕಾಣಿಕೆಗಳನ್ನು ಬಳಕೆ ಮಾಡದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಸುತ್ತೋಲೆ ಹೊರಡಿಸಿದ್ದಾರೆ.


    ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆ ನೀಡಬಾರದು ಎಂದು ಈ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈ ಸೂಚನೆಯನ್ನು ಸರ್ಕಾರಿ ಕಚೇರಿಗಳ ಅಧಿಕಾರಿಗಳು, ಸರ್ಕಾರಿ ಸ್ವಾಮ್ಯದ ಕಚೇರಿಗಳ ಅಧಿಕಾರಿಗಳಿಗೆ ಕಳುಹಿಸಲಾಗಿದೆ.

    300x250 AD


    ಈ ಸುತ್ತೋಲೆಯಲ್ಲಿ ಸಭೆ, ಸಮಾರಂಭಗಳಲ್ಲಿ ಇಂತಹ ಕಾಣಿಕೆಗಳಿಗೆ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದು ಎಂದು ತಿಳಿಸಲಾಗಿದೆ. ಈ ಸೂಚನೆಯನ್ನು ಸರ್ಕಾರಿ ಸಂಸ್ಥೆಗಳು, ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳು ಚಾಚೂ ತಪ್ಪದೆ ಪಾಲಿಸುವಂತೆ ಸರ್ಕಾರ ಸೂಚಿಸಿದೆ.


    ಸಿಎಂ ಬೊಮ್ಮಾಯಿ ಅವರು ಟ್ವೀಟ್ ಮಾಡಿದ್ದು, ಇದು ಅನವಶ್ಯಕ ವೆಚ್ಚ. ಸಭೆಗಳಲ್ಲಿ ಶಿಷ್ಟಾಚಾರದ ಹೆಸರಿನಲ್ಲಿ ಹೂಗುಚ್ಛ, ಹಾರ, ಶಾಲುಗಳನ್ನು ನೀಡುವ ಅಗತ್ಯವಿಲ್ಲ. ಇನ್ನು ಮುಂದೆ ಆ ಸಂಪ್ರದಾಯ ಬೇಡ ಎಂದು ಸೂಚಿಸಿದ್ದೇನೆ. ಇನ್ನು ಮುಂದೆ ಹೂ ಗುಚ್ಚದ ಬದಲಿಗೆ ಕನ್ನಡ ಪುಸ್ತಕಗಳನ್ನು ಕಾಣಿಕೆಯಾಗಿ ನೀಡಬಹುದು ಎಂದಿದ್ದಾರೆ.

    Share This
    300x250 AD
    300x250 AD
    300x250 AD
    Leaderboard Ad
    Back to top