Slide
Slide
Slide
previous arrow
next arrow

ಡಿ. 30ಕ್ಕೆ ಉದ್ಯೋಗ ಮೇಳ

300x250 AD

ಕಾರವಾರ: ಯೋಜನಾ ಉದ್ಯೋಗ ವಿನಿಮಯ ಕಛೇರಿ ಹಾಗೂ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಡಿ.30ರಂದು ರಾಷ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಉದ್ಯೋಗ ಮೇಳದಲ್ಲಿ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಅರ್ಹ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಯಾವುದೇ ಡಿಗ್ರಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆಯ ಪ್ರಮಾಣಪತ್ರಗಳ ಜೊತೆಗೆ ಆಧಾರ ಕಾರ್ಡ್, ಇತ್ತೀಚಿನ ಭಾವಚಿತ್ರದೊಂದಿಗೆ ಭಾಗವಹಿಸಬಹುದು.
ಆಸಕ್ತ 18 ರಿಂದ 35 ವರ್ಷ ವಯೋಮಿತಿ ಒಳಗಿನ ಉದ್ಯೋಗಾಕಾಂಕ್ಷಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಈ ಉದ್ಯೋಗ ಮೇಳವು ಡಿ.30ರಂದು ಬೆಳಿಗ್ಗೆ 9ರಿಂದ 3.30 ಗಂಟೆಗಳವರೆಗೆ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜು, ಕಾಜುಭಾಗ ಇಲ್ಲಿ ಆಯೋಜಿಸಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8310044796, 9743360656, 08382226386 ಗೆ ಸಂಪರ್ಕಿಸಿ ಎಂದು ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಪ್ರಭಾರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top