Slide
Slide
Slide
previous arrow
next arrow

ಅಮೃತ ಜೀವನ ಯೋಜನೆಯಡಿ ಅರ್ಜಿ ಆಹ್ವಾನ

300x250 AD

ಕಾರವಾರ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಿಂದ 2022-23 ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯ ಮುಖ್ಯಮಂತ್ರಿ ಅಮೃತ ಜೀವನ ಯೋಜನೆಯಡಿ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಪ್ರತಿ ಫಲಾನುಭವಿಗೆ ಹೈನುಗಾರಿಕೆ ಘಟಕದಡಿ ಒಂದು ಮಿಶ್ರತಳಿ ಹಾಲು ಕರೆಯುವ ಹಸು,ಎಮ್ಮೆ ನೀಡಲಾಗುವುದು. ಈ ಕಾರ್ಯಕ್ರಮದಡಿ ಘಟಕ ವೆಚ್ಚ ರೂ.62,000 ಇದ್ದು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಡಿ ಫಲಾನುಭವಿಗಳಿಗೆ ಶೇ 33.33ರಷ್ಟು ರೂ.20665 ಹಾಗೂ ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಶೇ 25ರಷ್ಟು ರೂ.15500ಗಳ ಸಹಾಯಧನ ಒದಗಿಸಲಾಗುವುದು. ಘಟಕದ ಸಹಾಯಧನ ಹೊರತುಪಡಿಸಿ ಉಳಿದ ಮೊತ್ತವನ್ನು ಫಲಾನುಭವಿಗಳ ವಂತಿಕೆ ಅಥವಾ ಸಾಲದ ರೂಪದಲ್ಲಿ ಬ್ಯಾಂಕಿನಿಂದ ಪಡೆಯಬಹುದಾಗಿದೆ.  ಫಲಾನುಭವಿ ಆಧಾರಿತ ಕಾರ್ಯಕ್ರಮಕ್ಕೆ ಆದ್ಯತೆ ಮೇರೆಗೆ ಕೂಲಿ ಕಾರ್ಮಿಕರು, ಕೃಷಿ ಕಾರ್ಮಿಕರು, ಕೂಲಿ ಮತ್ತು ಪಶುಸಂಗೋಪನೆಯಲ್ಲಿ ತೊಡಗಿಸಿಕೊಂಡವರನ್ನು ಆಯ್ಕೆ ಮಾಡಲಾಗುವುದು. ಸರ್ಕಾರದ ನಿಯಮಗಳಂತೆ ಮಹಿಳೆಯರಿಗೆ ಶೇ 33.3, ಅಲ್ಪಸಂಖ್ಯಾತರಿಗೆ ಶೇ 15 ಮತ್ತು ಅಂಗವಿಕಲರಿಗೆ ಶೇ 3ರಷ್ಟು ಆದ್ಯತೆ ನೀಡಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಫಲಾನುಭವಿಗಳು ತಮ್ಮ ಆರ್‌ಡಿ ಸಂಖ್ಯೆ ಇರುವ ಜಾತಿ ಪ್ರಮಾಣಪತ್ರವನ್ನು ಕಡ್ಡಾಯವಾಗಿ ಹೊಂದಿರಬೇಕು. ಫಲಾನುಭವಿಗಳನ್ನು ವಿಧಾನಸಭಾ ಕ್ಷೇತ್ರದ ಶಾಸಕರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು.
ಆಸಕ್ತಿಯುಳ್ಳವರು ಆಯಾ ತಾಲೂಕಿನ ಪಶುವೈದ್ಯ ಆಸ್ಪತ್ರೆಗಳಿಂದ ಅರ್ಜಿಯನ್ನು ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಜ.5ರೊಳಗೆ ತಾಲೂಕಾ ಪಶುವೈದ್ಯ ಆಸ್ಪತ್ರೆಗಳಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು ಎಂದು ಪಶುಪಾಲನೆ ಮತ್ತು ಪಶುವೈದ್ಯ ಸೇವೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

300x250 AD
Share This
300x250 AD
300x250 AD
300x250 AD
Back to top