• first
    Slide
    Slide
    previous arrow
    next arrow
  • ಕುಡ್ಲೆ ಕಡಲಲ್ಲಿ ಮುಳುಗುತ್ತಿದ್ದ ಪ್ರವಾಸಿಗರ ರಕ್ಷಣೆ

    300x250 AD

    ಕುಮಟಾ: ತಾಲೂಕಿನ ಗೋಕರ್ಣದ ಕುಡ್ಲೆ ಕಡಲಲ್ಲಿ ಮುಳುಗುತ್ತಿದ್ದ ಐಟಿ ಕಂಪನಿಯ ಇಬ್ಬರು ಉದ್ಯೋಗಿಗಳನ್ನು ಲೈಫ್ ಗಾರ್ಡ್ ಮತ್ತು ಗೃಹ ರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
    ಬೆಂಗಳೂರು ಮೂಲಕ ಐಟಿ ಕಂಪನಿಯ ಉದ್ಯೋಗಿಗಳಾದ ಯಶ್ (26) ಮತ್ತು ಶೇಜನ್ (26) ಎಂಬುವವರನ್ನು ರಕ್ಷಣೆ ಮಾಡಲಾಗಿದೆ. ಇವರಿಬ್ಬರು ಸ್ನೇಹಿತರ ಜೊತೆಗೆ ಪ್ರವಾಸಕ್ಕೆಂದು ಗೋಕರ್ಣಕ್ಕೆ ಬಂದಿದ್ದರು. ಕುಡ್ಲೆ ಕಡಲಲ್ಲಿ ಈಜುತ್ತಿರುವಾಗ ಅಲೆಗಳ ರಭಸಕ್ಕೆ ಮುಳುಗುವ ಹಂತ ತಲುಪಿದ್ದರು. ಇದನ್ನು ಗಮನಿಸಿದ ಲೈಫ್ ಗಾರ್ಡ್ಸ ಮತ್ತು ಗೃಹ ರಕ್ಷಕ ಸಿಬ್ಬಂದಿ ತಕ್ಷಣ ಧಾವಿಸಿ, ಇವರಿಬ್ಬರನ್ನು ಪ್ರಾಣಾಪಾಯದಿಂದ ರಕ್ಷಣೆ ಮಾಡಿದ್ದಾರೆ.
    ಲೈಫ್ ಗಾರ್ಡ್ ನಾಗೇಂದ್ರ ಮತ್ತು ಗೃಹ ರಕ್ಷಕ ದಳದ ಶೇಖರ್ ಎಂಬುವವರು ಪ್ರವಾಸಿಗರನ್ನು ರಕ್ಷಣೆ ಮಾಡುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಈ ಸಂಬಂಧ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    300x250 AD
    Share This
    300x250 AD
    300x250 AD
    300x250 AD
    Back to top