• Slide
    Slide
    Slide
    previous arrow
    next arrow
  • ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ಆಗ್ರಹ

    300x250 AD

    ಹೊನ್ನಾವರ: ತಾಲ್ಲೂಕಿನ ಗುಣವಂತೆಯ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಸಾತ್ವಿಕ ಉಡುಪುಗಳನ್ನು ಧರಿಸಿ ಬರುವ ದೃಷ್ಟಿಯಿಂದ ದೇವಾಲಯದಲ್ಲಿ ವಸ್ತ್ರಸಂಹಿತೆ ಜಾರಿಗೆ ತರಬೇಕು ಎಂದು ಒತ್ತಾಯಿಸಿ ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದೂ ಸಂಘಟನೆಗಳ ಸದಸ್ಯರು ಶಂಭುಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದರು. ಶಂಭುಲಿಂಗೇಶ್ವರ ದೇವಸ್ಥಾನವು ಜಿಲ್ಲೆಯ ಪ್ರಮುಖ ದೇವಾಲಯಗಳಲ್ಲಿ ಒಂದಾಗಿದ್ದು, ಕಾರಣಿಕ ಸ್ಥಳವಾಗಿದ್ದು ಅತ್ಯಂತ ಪವಿತ್ರ ಹಾಗೂ ಸಮಾಜಕ್ಕೆ ಚೈತನ್ಯವನ್ನು ನೀಡುವ ಪುಣ್ಯ ಕ್ಷೇತ್ರವಾಗಿದೆ. ಶಂಭುಲಿಂಗೇಶ್ವರ ಅಸ್ತಿತ್ವದಿಂದ ಗುಣವಂತೆ ನಗರ ಪಾವನವಾಗಿದೆ. ಇಂತಹ ದೇವಸ್ಥಾನದ ಪಾವಿತ್ರ್ಯವನ್ನು ಉಪಾಸನೆ ಮಾಡಿದರೆ ಮಾತ್ರ ಅಲ್ಲಿರುವ ದೇವತ್ವದ ಅನುಭವವನ್ನು ಪಡೆಯಬಹುದು ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.
    ಹಿಂದೂ ಸಂಸ್ಕೃತಿಯ ಪ್ರಕಾರ ಉಡುಪುಗಳನ್ನು ಧರಿಸುವುದರಿಂದ ಈಶ್ವರಿ ಚೈತನ್ಯದ ಲಾಭವಾಗುತ್ತದೆ ಮತ್ತು ದೇವತೆಯ ತತ್ವದ ಅನೂಭೂತಿ ಬರುತ್ತದೆ. ಆದರೆ ಪಾಶ್ಚಾತ್ಯ ಉಡುಪುಗಳಿಂದ ಕೆಟ್ಟ ಶಕ್ತಿಗಳಿಗೆ ಆಮಂತ್ರಣ ನೀಡಿದಂತಾಗುತ್ತದೆ. ಆದ್ದರಿಂದ ದೇವಸ್ಥಾನಗಳಲ್ಲಿ ಅವುಗಳ ಪಾವಿತ್ರ್ಯತೆ ಮತ್ತು ಆಧ್ಯಾತ್ಮಿಕ ಸೌಂದರ್ಯವನ್ನು ಕಾಪಾಡುವುದು ಪ್ರತಿಯೊಬ್ಬ ಭಕ್ತರ ಆದ್ಯ ಕರ್ತವ್ಯ ಆಗಿದೆ. ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಭಕ್ತರು ಸಾತ್ವಿಕ ಉಡುಪುಗಳನ್ನು ಧರಿಸಿ ಬರಲು ನಿಯಮವನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.
    ಈ ಸಂದರ್ಭದಲ್ಲಿ ಎಂ.ವಿ.ಹೆಗಡೆ, ಎಂ.ಎಸ್.ಹೆಗಡೆ, ಜಿ.ಎಸ್.ಗೌಡ, ಶಂಕರ ಗೌಡ, ಮಾಧವ ಪಂಡಿತ್, ದೇವಪ್ಪ ಜಿ.ನಾಯ್ಕ್, ಶಂಭು ಗೌಡ, ಶ್ರೀಧರ ಹೆಗಡೆ, ಗೌರೀಶ್ ಗೌಡ, ಶರತ್‌ಕುಮಾರ್ ನಾಯ್ಕ, ಗೌರೀಶ್ ಗೌಡ ಮುಂತಾದವರು ಇದ್ದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top