• Slide
    Slide
    Slide
    previous arrow
    next arrow
  • ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನ

    300x250 AD

    ಕಾರವಾರ: ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ 2022-23ನೇ ಸಾಲಿನ ತಾಲೂಕಿನ ಕಡವಾಡ, ದೇವಳಮಕ್ಕಿ, ಮಾಜಾಳಿ ಗ್ರಾಮ ಪಂಚಾಯತಿಯಲ್ಲಿ ತಲಾ ಒಂದರoತೆ 3 ಹುದ್ದೆಗಳು, ನಗರಸಭೆ ವ್ಯಾಪ್ತಿಯಲ್ಲಿ 2 ಹುದ್ದೆ, ಒಟ್ಟು 5 ಹುದ್ದೆಗಳನ್ನು ನಗರ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರನ್ನು ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
    ಅರ್ಜಿದಾರರು ದೈಹಿಕ ವಿಕಲಚೇತನರಾಗಿದ್ದು, ನಡೆದಾಡಲು ಸಮರ್ಥರಿರುವ, ಕನಿಷ್ಠ ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರುವ, 18 ರಿಂದ 45 ವಯೋಮಿತಿಯವರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಯ ಫಾರ್ಮ್ಗಳನ್ನು ನೋಡಲ್ ಅಧಿಕಾರಿಗಳು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಹಾಗೂ ವಿವಿದ್ದೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಿ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಡಿ.31ರೊಳಗೆ ಸಲ್ಲಿಸುವಂತೆ ಸೂಚಿಸಿದ್ದಾರೆ.
    ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382222532 ಗೆ ಸಂಪರ್ಕಿಸಲು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top