ಕಾರವಾರ: ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯಿಂದ 10 ದಿನಗಳ ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
ಆಸಕ್ತ 18ರಿಂದ 45 ವಯಸ್ಸಿನ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕ ಯುವತಿಯರು ತಮ್ಮ ಹೆಸರು, ವಿಳಾಸಗಳನ್ನು ಡಿ.24ರೊಳಗಾಗಿ ನೊಂದಾಯಿಸಿಕೊಳ್ಳಬೇಕು. ಜನವರಿಯಿಂದ ತರಬೇತಿಯು ಪ್ರಾರಂಭವಾಗಲಿದೆ. ತರಬೇತಿಯು ಊಟ- ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತವೆ. ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕಿಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿಂಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಉಚಿತವಾಗಿ ಮಾಹಿತಿ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ವಿಳಾಸಕ್ಕೆ ಅಥವಾ ಸಂಸ್ಥೆಯ ದೂರವಾಣಿ ಸಂಖ್ಯೆ: 9482188780, 9483485489 ಗೆ ಸಂಪರ್ಕಿಸಬಹುದು ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಹೈನುಗಾರಿಕೆ, ಎರೆಹುಳ ಗೊಬ್ಬರ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
![](https://euttarakannada.in/wp-content/uploads/2021/08/euk-logo-1-640x438.jpg?v=1628473623)