ಸಿದ್ದಾಪುರ: ತಾಲೂಕಿನ ಶಿಕ್ಷಣ ಪ್ರಸಾರಕ ಸಮಿತಿಯ ಚೇತನಾ ಪದವಿಪೂರ್ವ ಕಾಲೇಜಿನಲ್ಲಿ ಡಿ.23, ಶುಕ್ರವಾರದಂದು ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ ನಡೆಯಿತು. ಸಿದ್ದಾಪುರ ತಾಲೂಕಿನ ಎಲ್ಲಾ ಪ್ರೌಢಶಾಲಾ ವಿದ್ಯಾರ್ಥಿಗಳು ಅನೇಕ ಮಾದರಿಯನ್ನು ಪ್ರದರ್ಶಿಸಿದರು.
ಕಾರ್ಯಕ್ರಮವನ್ನು ಡಾ. ಶಶಿಭೂಷಣ ಹೆಗಡೆ ಉದ್ಘಾಟಿಸಿ ಮಾತನಾಡಿ, ವಿಜ್ಞಾನದ ಮಹತ್ವ, ವಿಷಯದ ಆಯ್ಕೆ ಮತ್ತು ವೈಜ್ಞಾನಿಕ ಮನೋಭಾವನೆಯ ಅವಶ್ಯಕತೆಯ ಕುರಿತು ತಿಳಿಸಿದರು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಎಂಎಂ ಕಲಾ ಮತ್ತು ವಿಜ್ಞಾನ ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಗಣೇಶ್ ಹೆಗಡೆ ಕೃಷಿ ಕ್ಷೇತ್ರದಲ್ಲಿ ವಿಜ್ಞಾನದ ಬಳಕೆ, ಗ್ರಾಮೀಣ ಜನರಲ್ಲಿ ವೈಜ್ಞಾನಿಕ ಮನೋಭಾವನೆಯ ಬೆಳೆಸುವ ಕುರಿತು ಹಾಗೂ ಪ್ರಯೋಗಗಳ ಮಹತ್ವ ಮತ್ತು ಪ್ರಯೋಗಗಳಲ್ಲಿ ತೆಗೆದುಕೋಳ್ಳಬೇಕಾದ ಎಚ್ಚರಿಕೆ ಕ್ರಮದ ಕುರಿತು ವಿಸ್ತಾರವಾಗಿ ತಿಳಿಸಿದರು.
ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಯು.ಟಿ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸುತ್ತಲಿನ ಪ್ರೌಢಶಾಲಾ ವಿದ್ಯಾರ್ಥಿಗಳು ವಿಜ್ಞಾನ ವಸ್ತಪ್ರದರ್ಶನ ವೀಕ್ಷಿಸಿ ಪ್ರದರ್ಶನದ ಸದುಪಯೋಗ ಪಡೆದುಕೊಂಡರು.
ಕವಂಚೂರಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಮಕ್ಕಳು ಪ್ರಥಮ ಸ್ಥಾನ ಹಾಗೂ ಎಸ್.ವಿ. ಪ್ರೌಢಶಾಲಾ ಮಕ್ಕಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡರು.