Slide
Slide
Slide
previous arrow
next arrow

ಕಾಂಗ್ರೆಸ್ ಅಧಿಕಾರ ಚುಕ್ಕಾಣಿ ಹಿಡಿಯಲು ಯುವಕರು ಒಗ್ಗೂಡಿ ಶ್ರಮಿಸಿ: ಯುವ ಕಾಂಗ್ರೆಸ್ ಅಧ್ಯಕ್ಷ ಉಸ್ಮಾನ್ ಕರೆ

300x250 AD

ದಾಂಡೇಲಿ: ಈ ದೇಶದಲ್ಲಿ ಮತ್ತು ರಾಜ್ಯದಲ್ಲಿ ಸುಭದ್ರ ಆಡಳಿತವನ್ನು ನೀಡಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ. ಬರಲಿರುವ ದಿನಗಳಲ್ಲಿ ರಾಜ್ಯ, ರಾಷ್ಟ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪಕ್ಷ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಬೇಕು. ಈ ನಿಟ್ಟಿನಲ್ಲಿ ಯುವ ಕಾಂಗ್ರೆಸ್ ಬಲವರ್ಧನೆಗೆ ಯುವಕರೆಲ್ಲರೂ ಒಗ್ಗೂಡಿ ಶ್ರಮಿಸಬೇಕೆಂದು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಉಸ್ಮಾನ್ ಮುನ್ನ ವಹಾಬ್ ಕರೆ ನೀಡಿದರು.
ಅವರು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾದ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಆರ್.ವಿ.ದೇಶಪಾಂಡೆಯವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವ ಮಹತ್ವದ ಪಣವನ್ನು ತೊಟ್ಟು ಸಮರವೀರರಾಗಿ ಪಕ್ಷ ಸಂಘಟನೆಯಲ್ಲಿ ಯುವಕರು ತೊಡಗಿಕೊಳ್ಳಬೇಕೆಂದರು. ಆರ್.ವಿ.ದೇಶಪಾಂಡೆಯವರು ಕ್ಷೇತ್ರಕ್ಕೆ ನೀಡಿದ ಕೊಡುಗೆ, ಅವರ ಅನುಭವ ಮತ್ತವರ ಅಭಿವೃದ್ದಿ ಕಾರ್ಯಗಳೇ ಕ್ಷೇತ್ರದ ಪಕ್ಷ ಸಂಘಟಿಸಲು ಪ್ರೇರಣಾದಾಯಿಯಾಗಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಪ್ರಭಾರಿ ಅಧ್ಯಕ್ಷ ವಿ.ಆರ್.ಹೆಗಡೆ ಮಾತನಾಡಿ, ಉಸ್ಮಾನ್ ಮುನ್ನ ವಹಾಬ್ ಅವರು ಸಮರ್ಥವಾಗಿ ಯುವ ಕಾಂಗ್ರೆಸ್ ಸಮಿತಿಯನ್ನು ಮುನ್ನಡೆಸಲಿದ್ದು, ಅವರ ನೇತೃತ್ವದಲ್ಲಿ ಯುವಕರು ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಶ್ರಮಿಸುವಂತೆ ಕರೆ ನೀಡಿದರು.
ಪಕ್ಷದ ಮುಖಂಡ ಇಕ್ಬಾಲ್ ಶೇಖ್, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಪೂಜಾರ್ ಮಾತನಾಡಿ, ಯುವಕರು ಜಾಗೃತರಾಗಬೇಕು. ಕ್ಷೇತ್ರದಲ್ಲಿ ಆರ್.ವಿ.ದೇಶಪಾಂಡೆಯವರು ಮಾಡಿದ ಸಾಧನೆಗಳನ್ನು ಮನೆ ಮನಗಳಿಗೆ ತಲುಪಿಸುವ ಕರ‍್ಯವನ್ನು ಪರಿಣಾಮಕಾರಿಯಾಗಿ ಮಾಡಲು ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಸಾಧ್ಯವಿದ್ದು, ಎಲ್ಲರು ಒಗ್ಗೂಡಿ ಪಕ್ಷ ಸಂಘಟನೆಗೆ ಶ್ರಮಿಸೋಣ ಎಂದರು.
ವೇದಿಕೆಯಲ್ಲಿ ನಗರಸಭೆಯ ಅಧ್ಯಕ್ಷೆ ಸರಸ್ವತಿ ರಜಪೂತ್, ಉಪಾಧ್ಯಕ್ಷರಾದ ಸಂಜಯ್ ನಂದ್ಯಾಳ್ಕರ್ ಮೊದಲಾದವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಸ್ಮಾನ್ ಮುನ್ನ ವಹಾಬ್ ಅವರನ್ನು ಪಕ್ಷದ ಕಾರ್ಯಕರ್ತರು, ಮುಖಂಡರು ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

300x250 AD
Share This
300x250 AD
300x250 AD
300x250 AD
Back to top