• Slide
    Slide
    Slide
    previous arrow
    next arrow
  • ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿ ಜಾರಿ: ಹೊಸ ವರ್ಷಾಚರಣೆಗೆ ರಾತ್ರಿ 1ರ ಗಡುವು

    300x250 AD

    ಬೆಂಗಳೂರು: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ವೈರಸ್‌ನ ಹೊಸ ತಳಿಯ ಕಾರಣಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ರೋಗ ತಡಗೆ ರಾಜ್ಯದಲ್ಲೂ ಕೆಲವು ಮಾರ್ಗ ಸೂಚಿಗಳನ್ನು ಜಾರಿಗೆ ತರಲಾಗಿದೆ.
    ಮಾರ್ಗಸೂಚಿಗೆ ಸಂಬಂಧಿಸಿದಂತೆ ಸೋಮವಾರ ನಡೆದ ಸರ್ಕಾರದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಆರೋಗ್ಯ ಸಚಿವ ಸುಧಾಕರ್ ಮತ್ತು ಕಂದಾಯ ಸಚಿವ ಆರ್.ಆಶೋಕ, ಹೊಸ ನಿಯಮಗಳನ್ನು ಪ್ರಕಟಿಸಿದರು. ಚಿತ್ರಮಂದಿರಗಳು, ಶಾಲಾ-ಕಾಲೇಜುಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಪಬ್‌ಗಳು, ರೆಸ್ಟೋರೆಂಟ್‌ಗಳು ಮತ್ತು ಬಾರ್‌ಗಳಲ್ಲಿ ಹೊಸ ವರ್ಷ ಆಚರಿಸುವ ವೇಳೆ ಮಾಸ್ಕ್ ಧರಿಸಿರಲೇಬೇಕು. ಹೊಸ ವರ್ಷದ ಆಚರಣೆಗಳು ರಾತ್ರಿ 1ರ ಒಳಗೇ ಅಂತ್ಯವಾಗಬೇಕು. ಯಾರೂ ಭಯಪಡಬೇಕಿಲ್ಲ.ಮುನ್ನೆಚ್ಚರಿಕೆ ವಹಿಸಬೇಕು ಎಂದು ಸುಧಾಕರ್ ಹೇಳಿದರು. ಆಚರಣೆಗಳು ನಡೆಯುವ ಸ್ಥಳಗಳಲ್ಲಿ ಅನುಮತಿಸಲಾದ ಸಾಮರ್ಥ್ಯಕ್ಕಿಂತ ಹೆಚ್ಚು ಜನರು ಇರಬಾರದು ಎಂದು ಅವರು ತಿಳಿಸಿದರು.

    300x250 AD
    Share This
    300x250 AD
    300x250 AD
    300x250 AD
    Leaderboard Ad
    Back to top