• first
    Slide
    Slide
    previous arrow
    next arrow
  • ಕಲೋತ್ಸವ ಸ್ಪರ್ಧೆ: ಚಂದನ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

    300x250 AD

    ಶಿರಸಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕರ್ನಾಟಕ ರಾಜ್ಯ ಸರ್ಕಾರ ನಡೆಸಿದ ಕಲೋತ್ಸವ ಸ್ಪರ್ಧೆಗಳಲ್ಲಿ ಮಿಯಾರ್ಡ್ಸ ಚಂದನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಉತ್ತಮ ಪ್ರದರ್ಶನ ತೋರಿ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

    10ನೇ ವರ್ಗದ ಪ್ರಥಮ್ ಯು.ಎನ್. ಶಾಸ್ತ್ರೀಯ ಸಂಗೀತ ಹಾಡುಗಾರಿಕೆಯಲ್ಲಿ, 10ನೇ ವರ್ಗದ ಸಂಭ್ರಮಾ ಹೆಗಡೆ ನಾಟಕದಲ್ಲಿ, 9ನೇ ವರ್ಗದ ಪಿ.ಜಿ. ಶ್ರೇಷ್ಠಾ ವಾದ್ಯ ಸಂಗೀತ ತಬಲಾ ವಾದನ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 9ನೇ ವರ್ಗದ ಸಿರಿ ಹೆಗಡೆ ಶಾಸ್ತ್ರೀಯ ನೃತ್ಯ ಸ್ಪರ್ಧೆಯಲ್ಲಿ ಜಿಲ್ಲಾ ಹಂತದಲ್ಲಿ ತೃತೀಯ ಸ್ಥಾನ ಪಡೆದಿದ್ದಾಳೆ.
    ಪ್ರಶಸ್ತಿ ಪಡೆದ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ,ಶಿಕ್ಷಕರು,ಪಾಲಕರು, ವಿದ್ಯಾರ್ಥಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.

    300x250 AD
    Share This
    300x250 AD
    300x250 AD
    300x250 AD
    Back to top