Slide
Slide
Slide
previous arrow
next arrow

300 ಕೋಟಿ ಮೌಲ್ಯದ ಶಸ್ತ್ರಾಸ್ತ್ರ, ಮದ್ದುಗುಂಡುಗಳಿದ್ದ ಪಾಕ್ ದೋಣಿ ವಶಕ್ಕೆ

300x250 AD

ನವದೆಹಲಿ: 300 ಕೋಟಿ ಮೌಲ್ಯದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸುಮಾರು 40 ಕೆಜಿ ಮಾದಕ ವಸ್ತುಗಳೊಂದಿಗೆ ಭಾರತದ ಜಲಪ್ರದೇಶಕ್ಕೆ ನುಗ್ಗಲು ಯತ್ನಿಸುತ್ತಿದ್ದ ಪಾಕಿಸ್ತಾನದ ದೋಣಿಯನ್ನು ಗುಜರಾತ್ ಕರಾವಳಿಯಲ್ಲಿ ಭಾರತೀಯ ಕೋಸ್ಟ್ ಗಾರ್ಡ್ನಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ. 10 ಮಂದಿಯನ್ನು ಬಂಧಿಸಲಾಗಿದೆ.
ಪಾಕಿಸ್ತಾನದ ದೋಣಿಯಲ್ಲಿದ್ದ ಹತ್ತು ಮಂದಿಯನ್ನು ಬಂಧಿಸಲಾಗಿದೆ. ಭಾರತೀಯ ಕೋಸ್ಟ್ ಗಾರ್ಡ್ ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳದಿಂದ (ATS) ಗುಪ್ತಚರ ಮಾಹಿತಿಯನ್ನು ಪಡೆದುಕೊಂಡ ಬಳಿಕ ಈ ಕಾರ್ಯಾಚರಣೆ ನಡೆಸಲಾಗಿದೆ. ಐಸಿಜಿ ಪಾಕಿಸ್ತಾನದ ಮೀನುಗಾರಿಕಾ ದೋಣಿ ‘ಅಲ್ ಸೊಹೆಲಿ’ ಅನುಮಾನಾಸ್ಪದವಾಗಿ ಚಲಿಸುತ್ತಿರುವುದನ್ನು ಗಮನಿಸಲಾಗಿತ್ತು.
ಭಾರತೀಯ ಕೋಸ್ಟ್ ಗಾರ್ಡ್ ಪಾಕಿಸ್ತಾನಿ ದೋಣಿಯಲ್ಲಿದ್ದವರನ್ನು ಪ್ರಶ್ನಿಸಲು ಪ್ರಾರಂಭಿಸಿದಾಗ, ಅವರು ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದರು. ಭಾರತೀಯ ಕೋಸ್ಟ್ ಗಾರ್ಡ್ ಎಚ್ಚರಿಕೆಯ ಗುಂಡು ಹಾರಿಸಿದಾಗಲೂ ದೋಣಿ ನಿಲ್ಲಲಿಲ್ಲ. ನಂತರ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಳ್ಳಲಾಗಿದೆ.

300x250 AD
Share This
300x250 AD
300x250 AD
300x250 AD
Back to top