Slide
Slide
Slide
previous arrow
next arrow

ಅಕ್ರಮ ಗಣಿಗಾರಿಕೆ ತಡೆಗೆ ಖನಿಜ ರಕ್ಷಣಾ ಪಡೆ ಸ್ಥಾಪನೆ: ಸಚಿವ ಹಾಲಪ್ಪ

300x250 AD

ಬೆಳಗಾವಿ: ರಾಜ್ಯದ ಖನಿಜ ಮತ್ತು ಉಪಖನಿಜ ಅನಧಿಕೃತ ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟಲು ಹಾಗೂ ರಾಜ್ಯದ ಖನಿಜ ಸಂಪತ್ತನ್ನ ಸಂರಕ್ಷಿಸಿ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಪ್ರಪ್ರಥಮ ಬಾರಿಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧೀನದಲ್ಲಿ ಪ್ರತಿ ಜಿಲ್ಲೆಯಲ್ಲಿ ಖನಿಜ ರಕ್ಷಣಾ ಪಡೆಯನ್ನು ಸ್ಥಾಪಿಸಲಾಗಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ತಿಳಿಸಿದರು.
ಸುವರ್ಣ ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ‘ಖನಿಜ ರಕ್ಷಣಾ ಪಡೆ’ಯ ಗಸ್ತುವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ಕರ್ನಾಟಕ ಉಪ ಖನಿಜ ರಿಯಾಯಿತಿ ನಿಯಮಗಳಂತೆ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಖನಿಜ ಮತ್ತು ಉಪಖನಿಜಗಳ ಅನಧಿಕೃತ ಗಣಿಗಾರಿಕೆ, ದಾಸ್ತಾನು ಮತ್ತು ಸಾಗಾಣಿಕೆ ವಿರುದ್ದ ಕ್ರಮ ಕೈಗೊಳ್ಳಲು ಅಧಿಕಾರ ನೀಡಲಾಗಿರುತ್ತದೆ. ಆದಾಗ್ಯೂ ಸದರಿ ಇಲಾಖೆಗಳಿಂದ ಅಕ್ರಮ ಖನಿಜ ಮತ್ತು ಉಪಖನಿಜಗಳ ಗಣಿಗಾರಿಕೆ ಮತ್ತು ಸಾಗಾಣಿಕೆಯನ್ನು ತಡೆಗಟ್ಟುವ ಕ್ರಮಗಳು ಹೆಚ್ಚಿನ ಪರಿಣಾಮಕಾರಿಯಾಗಿರುವುದಿಲ್ಲ. ಈ ಹಿನ್ನಲೆಯಲ್ಲಿ ಅಕ್ರಮ ಖನಿಜ ಮತ್ತು ಉಪಖನಿಜಗಳ ಗಣಿಗಾರಿಕೆ ಮತ್ತು ಸಾಗಾಣಿಕೆ ತಡೆಗಟ್ಟಲು, ಸಂಬoಧಿಸಿದ ಇಲಾಖೆಗಳಲ್ಲಿನ ಕೆಲಸದ ಒತ್ತಡಗಳಿಂದ ಹೆಚ್ಚಿನ ಯಶಸ್ಸು ಸಾಧ್ಯವಾಗಿರುವುದಿಲ್ಲ. ಆದ್ದರಿಂದ, ದಿನಾಂಕ: 30-04-2020 ರಂದು ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧೀನದಲ್ಲಿ ಪ್ರತಿ ಜಿಲ್ಲೆಯಲ್ಲಿ ಒಂದು ಖನಿಜ ರಕ್ಷಣಾ ಪಡೆಯನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರಪ್ರಥಮ ಬಾರಿಗೆ ಮಂಗಳವಾರ ಬೆಳಗಾವಿಯಲ್ಲಿ ಗಸ್ತುವಾಹನಗಳಿಗೆ ಚಾಲನೆ ನೀಡುವ ಮೂಲಕ ಖನಿಜ ರಕ್ಷಣಾ ಪಡೆಗೆ ಚಾಲನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಮೊದಲ ಹಂತದಲ್ಲಿ ರಾಜ್ಯದ ಕೋಲಾರ, ಚಿಕ್ಕಬಳ್ಳಾಪುರ, ರಾಯಚೂರು, ಹಾವೇರಿ, ಬೆಳಗಾವಿ, ಕಲಬುರಗಿ, ಕೊಪ್ಪಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಖನಿಜ ರಕ್ಷಣಾ ಪಡೆ ಸ್ಥಾಪಿಸಲು ಕ್ರಮವಹಿಸಲಾಗಿದೆ. ಖನಿಜ ರಕ್ಷಣಾ ಪಡೆ ಸಮರ್ಥವಾಗಿ ಕಾರ್ಯ ನಿರ್ವಹಿಸಲು ಪ್ರತಿ ಜಿಲ್ಲೆಗೆ ಹವಾಲ್ದಾರ್ ದರ್ಜೆಯ 03 ನಿವೃತ್ತ ಸೈನಿಕರನ್ನು ನೇಮಕಮಾಡಿಕೊಳ್ಳಲಾಗಿದೆ ಮತ್ತು ಜಿಲ್ಲಾ ಖನಿಜ ಪ್ರತಿಷ್ಠಾನ ನಿಧಿಯಿಂದ 44 ಹೊಸ ವಾಹನವನ್ನು ಖರೀದಿಸಲು ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
ಖನಿಜ ಮತ್ತು ಉಪಖನಿಜ ಅನಧಿಕೃತ ಗಣಿಗಾರಿಕೆ ಮತ್ತು ಸಾಗಾಣಿಕೆ ತಡೆಗಟ್ಟಲು ಹಾಗೂ ರಾಜ್ಯದ ಖನಿಜ ಸಂಪತ್ತನ್ನು ಸಂರಕ್ಷಿಸಿ ಆದಾಯವನ್ನು ಹೆಚ್ಚಿಸಲು ಖನಿಜ ರಕ್ಷಣಾ ಪಡೆ ಸಮರ್ಥವಾಗಿ ಕಾರ್ಯ ನಿರ್ವಹಿಸಲು ವಿಧ್ಯುಕ್ತವಾಗಿ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಾಲನೆ ನೀಡಲಾಗಿದೆ. ಅನಧಿಕೃತ ಗಣಿಗಾರಿಕೆ ಹಾಗೂ ಸಾಗಾಣಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ನಮ್ಮ ಸರಕಾರ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದು, ರಾಜ್ಯದ ಇತಿಹಾಸದಲ್ಲೆ ಪ್ರಪ್ರಥಮ ಬಾರಿಗೆ ಖನಿಜ ರಕ್ಷಣಾ ಪಡೆಯನ್ನು ಪ್ರಾರಂಭಿಸಲಾಗಿದೆ ಎಂದು ಸಚಿವರು ಹೇಳಿದರು.

300x250 AD
Share This
300x250 AD
300x250 AD
300x250 AD
Back to top