• first
    Slide
    Slide
    previous arrow
    next arrow
  • ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

    300x250 AD

    ಹೊನ್ನಾವರ: ಕವಲಕ್ಕಿಯ ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.
    ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ಶ್ರೀ ಭಾರತೀ ಎಜ್ಯುಕೇಶನ್‌ನ ಟ್ರಸ್ಟಿ ವಿ.ಜಿ.ಹೆಗಡೆ, ಮಕ್ಕಳು ಸೋಲು- ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಮತ್ತು ಉತ್ಸಾಹದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಕರೆಕೊಟ್ಟರು.
    ಕೆಡಿಪಿ ನಾಮನಿರ್ದೇಶಿತ ಸದಸ್ಯ ಎಮ್.ಎಸ್.ಹೆಗಡೆ ಮಾತನಾಡಿ, ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾದಂತಹ ವಿದ್ಯಾರ್ಥಿಗಳಿಗೆ ಶುಭಕೋರಿದರು. ಕ್ರೀಡಾಪಟುಗಳಿಗೆ ಹುರಿದುಂಬಿಸಿದರು.
    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾರತೀ ಎಜ್ಯುಕೇಶನ್ ಟ್ರಸ್ಟಿನ ಅಧ್ಯಕ್ಷ ಉಮೇಶ ವಿ.ಹೆಗಡೆ ಅಬ್ಳಿ, ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದರು ಮತ್ತು ನಮ್ಮ ಶಾಲೆಯ ಶಿಕ್ಷಕರ ಕೆಲಸವನ್ನು ಶ್ಲಾಘಿಸಿದರು.
    ಈ ಕಾರ್ಯಕ್ರಮವನ್ನು ಸಹಶಿಕ್ಷಕಿ ಸೌಮ್ಯ ಹೆಗಡೆ ನಿರೂಪಿಸಿದರು. ಅಂಜನಾ ಶೆಟ್ಟಿ ಸ್ವಾಗತಿಸಿದರು. ದಿವ್ಯಾ ಡಿಸೋಜಾ ವಂದಿಸಿದರು.

    300x250 AD
    Share This
    300x250 AD
    300x250 AD
    300x250 AD
    Back to top