ಕಾರವಾರ: ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳ ವತಿಯಿಂದ 2022-23 ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆಯಡಿ ದ್ವಿಚಕ್ರ/ ತ್ರಿಚಕ್ರ ಸರಕು ಸಾಗಾಣಿಕೆ ವಾಹನ ಮತ್ತು ಮೈಕ್ರೋ ಕ್ರೇಡಿಟ್ (ಪ್ರೇರಣಾ) ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಪರಿಶಿಷ್ಟ ಜಾತಿಗೆ ಸೇರಿದ ಅರ್ಹ ಫಲಾನುಭವಿಗಳಿಂದ ಈಗಾಗಲೇ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು ನಿಗದಿತ ಅವಧಿಯೊಳಗೆ ಅರ್ಜಿ ಬಾರದೆ ಇರುವುದರಿಂದ ಪುನಃ ಅರ್ಜಿ ಸಲ್ಲಿಸಲು ಡಿ.31ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಅರ್ಜಿಗಳು ಸೇವಾ ಸಿಂಧು ಪೋರ್ಟಲ್‌ನ http://Sevasindhu.karnataka.gov.in ನಲ್ಲಿ ಲಭ್ಯವಿರುತ್ತದೆ. ಫಲಾಪೇಕ್ಷಿಗಳು ಗ್ರಾಮ ಒನ್ ಅಥವಾ ಬೆಂಗಳೂರು ಓನ್ ಅಥವಾ ಕರ್ನಾಟಕ ಓನ್ ಕೇಂದ್ರಗಳಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬೇಕು, ನಂತರ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08382226903ಗೆ ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್.ಅನಿನಿ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.